ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-11-2023)
ನಿತ್ಯ ನೀತಿ :ಅಧ್ಯಾತ್ಮ ಲೋಕದಲ್ಲಿ ಮೇಲು ಕೀಳೆಂಬ ತಾರತಮ್ಯ ಮಾಡಬಾರದು. ಅಲ್ಲಿ ಎಲ್ಲರೂ ಸಮಾನರು. ಯಾರೊಬ್ಬನೂ ತಾನು ಇನ್ನೊಬ್ಬರಿಗಿಂತ ಶ್ರೇಷ್ಠ ಎಂದು ಭಾವಿಸಬಾರದು.
ಪಂಚಾಂಗ ಮಂಗಳವಾರ 28-11-2023ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ರೋಹಿಣಿ / ಯೋಗ: ಸಿದ್ಧ / ಕರಣ: ತೈತಿಲ
ಸೂರ್ಯೋದಯ : ಬೆ.06.24ಸೂರ್ಯಾಸ್ತ : 05.51ರಾಹುಕಾಲ : 3.00-4.30ಯಮಗಂಡ ಕಾಲ : 9.00-10.30ಗುಳಿಕ ಕಾಲ : 12.00-1.30
ರಾಶಿ ಭವಿಷ್ಯಮೇಷ: ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಸಾಕಷ್ಟು ಸಮಯ ಕಳೆಯಲು ಬಯಸುವಿರಿ.ವೃಷಭ: ದುರಭ್ಯಾಸದಿಂದ ದೂರ ಉಳಿಯುವ ನಿಮ್ಮ ನಿರ್ಧಾರ ಪ್ರಯೋಜನಕಾರಿಯಾಗಲಿದೆ.ಮಿಥುನ: ಅಧ್ಯಯನ ಮಾಡುವಾಗ ಕೆಲವು ಸವಾಲು ಗಳನ್ನು ಎದುರಿಸಬೇಕಾಗುತ್ತದೆ.
ಕಟಕ: ನೆರೆಹೊರೆಯವ ರೊಂದಿಗೆ ಕಲಹ ಉಂಟಾಗಬಹುದು.ಸಿಂಹ: ಯೋಜಿತ ರೀತಿಯಲ್ಲಿ ಹೋದರೆ ಸಮಸ್ಯೆಗಳು ನಿವಾರಣೆಯಾಗುವುದರಲ್ಲಿ ಸಂದೇಹವಿಲ್ಲ.ಕನ್ಯಾ:ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೆ ಮುಂದೆ ಯೋಚಿಸಬೇಡಿ.
ತುಲಾ: ಅನಾರೋಗ್ಯ ಕಾರಣದಿಂದಾಗಿ ಮನಸ್ಸಿಗೆ ಕಿರಿಕಿರಿ ಉಂಟಾಗಲಿದೆ. ದೂರ ಪ್ರಯಾಣ ಮಾಡುವಿರಿ.ವೃಶ್ಚಿಕ: ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ. ಇಲ್ಲದಿದ್ದರೆ ಅಪಘಾತ ಸಂಭವಿಸಬಹುದು.ಧನುಸ್ಸು: ಕುಟುಂಬದ ಸದಸ್ಯರಿಂದ ಒಳ್ಳೆಯ ಸುದ್ದಿ ಕೇಳುವಿರಿ. ಅತ್ತಿಗೆಯಿಂದ ಲಾಭವಾಗಲಿದೆ.
ಮಕರ: ವೈದ್ಯವೃತ್ತಿಯಲ್ಲಿರುವವರು ಅಧಿಕ ಶ್ರಮ ಪಡುವುದರಿಂದ ಆಯಾಸ ಉಂಟಾಗಲಿದೆ.ಕುಂಭ: ಯಶಸ್ಸು ಸಾಧಿಸಲು ಯಾವುದೇ ಅಪಾಯವನ್ನಾದರೂ ಎದುರಿಸಲು ಸಿದ್ಧರಾಗಿರುತ್ತೀರಿ.ಮೀನ: ಸ್ವಂತ ಮನೆ ಹೊಂದುವ ಹಂಬಲ ಈಡೇರಲಿದೆ. ವ್ಯಾಪಾರಿಗಳಿಗೆ ಲಾಭದಾಯಕ ದಿನ.