ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-11-2023)
ನಿತ್ಯ ನೀತಿ : ಯಾರು ಏನಾದರೂ ಹೇಳಿಕೊಳ್ಳಲಿ ನೀವು ಸಮಾಧಾನದಿಂದಿರಿ. ಏಕೆಂದರೆ, ಸೂರ್ಯನ ಬಿಸಿಲು ಎಷ್ಟೇ ಜೋರಾಗಿದ್ದರೂ ಎಂದಿಗೂ ಸಮುದ್ರ ಬತ್ತುವುದಿಲ್ಲ.
ಪಂಚಾಂಗ ಬುಧವಾರ 08-11-2023ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ದಶಮಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಐಂದ್ರ / ಕರಣ: ಭವ
ಸೂರ್ಯೋದಯ : ಬೆ.06.15ಸೂರ್ಯಾಸ್ತ : 05.51ರಾಹುಕಾಲ : 12.00-1.30ಯಮಗಂಡ ಕಾಲ : 7.30-9.00ಗುಳಿಕ ಕಾಲ : 10.30-12.00
ರಾಶಿ ಭವಿಷ್ಯಮೇಷ: ನಿರೀಕ್ಷಿತ ಧನಾಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.ವೃಷಭ: ಧಾರ್ಮಿಕ ಕಾರ್ಯಗಳಿಗೆ ಹಣ ವ್ಯಯ ಮಾಡುವಿರಿ. ಮಕ್ಕಳಿಂದ ಸಂತೋಷ ಸಿಗಲಿದೆ.ಮಿಥುನ: ಸೌಜನ್ಯತೆಯಿಂದ ನಡೆದುಕೊಳ್ಳುವುದ ರಿಂದ ನೆರೆಹೊರೆಯವರು ನಿಮಗೆ ಸ್ಪಂದಿಸುವರು.
ಕಟಕ: ವ್ಯವಹಾರಕ್ಕೆ ಸಂಬಂಧಿಸಿದಂತೆ ಕಾನೂನು ವಿಷಯದಲ್ಲಿ ಹೆಚ್ಚಿನ ಸಲಹೆ ಪಡೆಯುವುದು ಅನಿವಾರ್ಯವಾಗಲಿದೆ.ಸಿಂಹ: ಅನಗತ್ಯ ಚರ್ಚೆಗಳಿಗೆ ಆಸ್ಪದ ನೀಡದಿರಿ. ಸಾಲ ಮಾಡುವ ಸ್ಥಿತಿ ತಂದುಕೊಳ್ಳಬೇಡಿ.ಕನ್ಯಾ: ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ. ನಿರೀಕ್ಷಿತ ಸ್ಥಾನಮಾನ ಸಿಗಲಿದೆ.
ತುಲಾ: ಲೇವಾದೇವಿ ವ್ಯವ ಹಾರ ನಡೆಸುವುದು ಸರಿಯಲ್ಲ.ವೃಶ್ಚಿಕ: ಶುಭ ಸಮಾರಂಭ ಗಳು ನಡೆಯುವುದರಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.ಧನುಸ್ಸು: ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಸಂತಸದ ದಿನ.
ಮಕರ: ಪತ್ನಿಯ ಸಹಕಾರದಿಂದ ನಿಮ್ಮ ಕೆಲಸ-ಕಾರ್ಯಗಳು ಸುಸೂತ್ರವಾಗಿ ನೆರವೇರಲಿವೆ.ಕುಂಭ: ಭೂಮಿ, ಆಸ್ತಿ ವಿಚಾರಗಳಲ್ಲಿ ಪ್ರಗತಿ ಕಾಣುವಿರಿ. ಮಕ್ಕಳಿಂದ ಶುಭವಾರ್ತೆ ಕೇಳುವಿರಿ.ಮೀನ: ಕಹಿ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಿ. ಹಿರಿಯರ ಮಾತುಗಳನ್ನು ಗೌರವಿಸಿ.