ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-11-2023)
ನಿತ್ಯ ನೀತಿ :ಹಣ ಮನುಷ್ಯನನ್ನು ಬದಲಿಸುವುದಿಲ್ಲ. ಮನುಷ್ಯನ ನಿಜ ಸ್ವರೂಪವನ್ನು ಹೊರಗೆ ಹಾಕುತ್ತದೆ.
ಪಂಚಾಂಗ ಭಾನುವಾರ 05-11-2023ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಪುಷ್ಯ / ಯೋಗ: ಶುಭ / ಕರಣ: ಬಾಲವ
ಸೂರ್ಯೋದಯ : ಬೆ.06.14ಸೂರ್ಯಾಸ್ತ : 05.52ರಾಹುಕಾಲ : 4.30-6.00ಯಮಗಂಡ ಕಾಲ : 12.00-1.30ಗುಳಿಕ ಕಾಲ : 3.00-4.30
ರಾಶಿ ಭವಿಷ್ಯಮೇಷ: ತಂದೆಯವರ ಕಠಿಣ ನಡವಳಿಕೆ ನಿಮಗೆ ಸಿಟ್ಟು ಬರಿಸುತ್ತದೆ. ಶಾಂತವಾಗಿರುವುದು ಒಳಿತು.ವೃಷಭ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.ಮಿಥುನ: ಮಕ್ಕಳ ಪ್ರಗತಿಯಲ್ಲಿ ಮಿಶ್ರ ಪ್ರತಿಫಲ ಕಾಣಬೇಕಾಗುತ್ತದೆ. ಶ್ರಮ ವಹಿಸಿ ಕೆಲಸ ಮಾಡಿ.
ಕಟಕ: ವಾಹನ ಕೊಳ್ಳಲು ಆಲೋಚನೆ ಮಾಡುವಿರಿ.ಸಿಂಹ: ನಿಮ್ಮ ಜನಪ್ರಿಯತೆ ಉತ್ತುಂಗದಲ್ಲಿರುತ್ತದೆ ಮತ್ತು ಇತರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುವಿರಿ.ಕನ್ಯಾ:ಸಾಧ್ಯವಾದಷ್ಟೂ ರಾತ್ರಿ ಪ್ರಯಾಣ ಮಾಡ ಬೇಡಿ.
ತುಲಾ: ಹೊಸ ವ್ಯವಹಾರ ಪ್ರಾರಂಭಿಸಿಲು ಉತ್ತಮ ದಿನ.ವೃಶ್ಚಿಕ: ವಧು-ವರನನ್ನು ಹುಡುಕುತ್ತಿದ್ದಲ್ಲಿ ಸೂಕ್ತ ಸಂಬಂಧ ಸಿಗುವುದು ಕಷ್ಟಸಾಧ್ಯ.ಧನುಸ್ಸು: ದೊಡ್ಡ ದೊಡ್ಡ ಕಾರ್ಯಕ್ರಮ ಆಯೋಜಿಸುವ ಮುನ್ನ ಹಿರಿಯರೊಂದಿಗೆ ಚರ್ಚಿಸಿ.
ಮಕರ: ಯುವಕರು ಶಾಶ್ವತ ಕೆಲಸ ಹುಡುಕುವ ಪ್ರಯತ್ನ ದಲ್ಲಿ ಯಶಸ್ವಿಯಾಗುತ್ತಾರೆ.ಕುಂಭ: ಯಾರ ಮೇಲೂ ವೈಯಕ್ತಿಕವಾಗಿ ದ್ವೇಷ ಸಾಧಿಸಲು ಹೋಗದಿರಿ. ಕಷ್ಟ ಎದುರಿಸಬೇಕಾಗುತ್ತದೆ.ಮೀನ: ಸಂಬಂಧಿಕರೊಂದಿಗೆ ಉತ್ತಮ ಬಾಂಧವ್ಯ ಇರಲಿದೆ. ದೂರ ಪ್ರಯಾಣ ಮಾಡುವಿರಿ.