ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-10-2023)
ನಿತ್ಯ ನೀತಿ :ಮನುಷ್ಯ ಪಶುಭಾವದಿಂದ ಬಾಳುವುದನ್ನು ಬಿಟ್ಟು ತನ್ನಲ್ಲಿರುವ ದೈವೀಗುಣಗಳನ್ನು ಜಾಗೃತಗೊಳಿಸಿಕೊಳ್ಳಬೇಕು. ಆಗ ಮಾತ್ರ ದೈವತ್ವ ಪ್ರಜ್ಞೆ ಜಾಗೃತವಾಗುತ್ತದೆ.
ಶುಕ್ರವಾರ ಪಂಚಾಂಗ 27-10-2023ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ಹರ್ಷಣ / ಕರಣ: ಗರಜ
ಸೂರ್ಯೋದಯ : ಬೆ.06.12ಸೂರ್ಯಾಸ್ತ : 05.55ರಾಹುಕಾಲ : 10.30-12.00ಯಮಗಂಡ ಕಾಲ : 3.00-4.30ಗುಳಿಕ ಕಾಲ : 7.30-9.00
ರಾಶಿ ಭವಿಷ್ಯಮೇಷ: ಅಮೂಲ್ಯ ವಸ್ತುಗಳ ಖರೀದಿಗೆ ಇಂದು ಬಹಳ ಉತ್ತಮವಾದ ದಿನ. ದೂರ ಪ್ರಯಾಣ ಮಾಡುವಿರಿ.ವೃಷಭ: ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಸಾಕಷ್ಟು ಸಮಯ ಕಳೆಯಲು ಬಯಸುವಿರಿ.ಮಿಥುನ: ಅಧ್ಯಯನ ಮಾಡುವಾಗ ಕೆಲವು ಸವಾಲು ಗಳನ್ನು ಎದುರಿಸಬೇಕಾಗುತ್ತದೆ.
ಕಟಕ: ಉದ್ಯೋಗ ಬದಲಾಯಿಸಲು ಯೋಚಿಸುವಿರಿ. ನೆರೆಹೊರೆ ಯವರೊಂದಿಗೆ ಕಲಹ ಉಂಟಾಗಲಿದೆ.ಸಿಂಹ: ಯೋಜಿತ ರೀತಿಯಲ್ಲಿ ಹೋದರೆ ಸಮಸ್ಯೆಗಳು ನಿವಾರಣೆಯಾಗುವುದರಲ್ಲಿ ಸಂದೇಹವಿಲ್ಲ.ಕನ್ಯಾ: ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳ ಕಾರ್ಯಕ್ಷಮತೆ ಬಹಳ ಉತ್ತಮವಾಗಿರುತ್ತದೆ. ಅನಿರೀಕ್ಷಿತ ಧನಾಗಮನ.
ತುಲಾ: ಅನಾರೋಗ್ಯ ಕಾರಣದಿಂದಾಗಿ ಮನಸ್ಸಿಗೆ ಕಿರಿಕಿರಿ ಉಂಟಾಗಲಿದೆ. ದೂರ ಪ್ರಯಾಣ ಮಾಡುವಿರಿ.ವೃಶ್ಚಿಕ: ಯಶಸ್ಸು ಸಾಧಿಸಲು ಯಾವುದೇ ಅಪಾಯವನ್ನಾದರೂ ಎದುರಿಸಲು ಸಿದ್ಧರಾಗಿರುತ್ತೀರಿ.ಧನುಸ್ಸು: ಕುಟುಂಬದ ಸದಸ್ಯರಿಂದ ಒಳ್ಳೆಯ ಸುದ್ದಿ ಕೇಳುವಿರಿ. ಅತ್ತಿಗೆಯಿಂದ ಲಾಭವಾಗಲಿದೆ.
ಮಕರ: ವೈದ್ಯವೃತ್ತಿಯಲ್ಲಿರುವವರು ಅಕ ಶ್ರಮ ಪಡುವುದರಿಂದ ಆಯಾಸ ಉಂಟಾಗಲಿದೆ.ಕುಂಭ: ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ. ಇಲ್ಲದಿದ್ದರೆ ಅಪಘಾತ ಸಂಭವಿಸಬಹುದು.ಮೀನ: ಸ್ವಯಂಕೃತ ಅಪರಾಧಗಳಿಂದ ನಷ್ಟ ಅನುಭವಿಸುವಿರಿ. ಸಾಲದ ಚಿಂತೆ ಕಾಡಲಿದೆ.