ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-10-2023)
ನಿತ್ಯ ನೀತಿ :ಎಷ್ಟೇ ಮೇಧಾವಿಯಾಗಿ ಬೆಳೆದರೂ ಅವರಲ್ಲೂ ಏರು-ಪೇರುಗಳು ಇದ್ದೇ ಇರುತ್ತವೆ. ಅದನ್ನು ಅರ್ಥೈಸಿಕೊಂಡು ಇನ್ನೊಬ್ಬರನ್ನು ಗೌರವಿಸಬೇಕು.
ಪಂಚಾಂಗ ಭಾನುವಾರ 15-10-2023ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಚಿತ್ತಾ / ಯೋಗ: ವೈಧೃತಿ / ಕರಣ: ಕಿಂಸ್ತುಘ್ನ
ಸೂರ್ಯೋದಯ : ಬೆ.06.10ಸೂರ್ಯಾಸ್ತ : 06.01ರಾಹುಕಾಲ : 4.30-6.00ಯಮಗಂಡ ಕಾಲ : 12.00-1.30ಗುಳಿಕ ಕಾಲ : 3.00-4.30
ರಾಶಿ ಭವಿಷ್ಯಮೇಷ: ಶುಭ ಸಮಾರಂಭಗಳು ನಡೆಯುವುದರಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.ವೃಷಭ: ವೃತ್ತಿ ಮತ್ತು ಮುಂದಿನ ಬದುಕಿನ ಬಗ್ಗೆ ಗಂಭೀರವಾಗಿ ಚಿಂತಿಸುವ ಅಗತ್ಯವಿದೆ.ಮಿಥುನ: ಆಸ್ತಿ ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ಆರೋಗ್ಯ ಸಮಸ್ಯೆ ಕಾಡುವುದು.
ಕಟಕ: ಸಹೋದರರ ಆಗಮನದಿಂದ ಮನಸ್ಸಿಗೆ ಸಂತಸವಾಗಲಿದೆ. ದೂರ ಪ್ರಯಾಣ ಮಾಡುವಿರಿ.ಸಿಂಹ: ರಫ್ತು, ಆಮದು ವ್ಯವಹಾರದಲ್ಲಿ ಉತ್ತಮ ಅವಕಾಶಗಳು ಸಿಗಲಿವೆ.ಕನ್ಯಾ: ನೀವು ಮಾಡುವ ಕೆಲಸ -ಕಾರ್ಯಗಳಿಂದ ಗೌರವಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಿ.
ತುಲಾ: ಮಧ್ಯವರ್ತಿಗಳ ಸಹಾಯದಿಂದಾಗಿ ವಿವಾಹದ ವಿಷಯದಲ್ಲಿ ಅನುಕೂಲವಾಗಲಿದೆ.ವೃಶ್ಚಿಕ: ವೃತ್ತಿ ಜೀವನದಲ್ಲಿ ಬಹಳಷ್ಟು ಬದಲಾವಣೆಗಳಾಗಲಿವೆ. ವಾಹನ ಚಾಲನೆಯಲ್ಲಿ ಜಾಗ್ರತೆ ವಹಿಸಿ.ಧನುಸ್ಸು: ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವಿರಿ. ಪ್ರಯಾಣದಲ್ಲಿ ಕಿರಿಕಿರಿ ಉಂಟಾಗಬಹುದು.
ಮಕರ: ಕಾರ್ಯ ನಿಮಿತ್ತ ದೂರ ಪ್ರಯಾಣ ಮಾಡ ಬೇಕಾಗಬಹುದು. ಪಾಲುದಾರಿಕೆಯಲ್ಲಿ ನಷ್ಟ.ಕುಂಭ: ಸಮೀಪ ವರ್ತಿಗಳಿಂದ ಮೋಸ ಹೋಗುವ ಸಾಧ್ಯತೆಗಳಿವೆ. ಎಚ್ಚರ ವಹಿಸಿ.ಮೀನ: ನಿಮ್ಮ ನೆಚ್ಚಿನ ಕಾರ್ಯಯೋಜನೆಗಳು ಕೈಗೂಡಲಿವೆ. ಸಂಭ್ರಮದ ದಿನ.