ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-09-2024)
'  - 21-09-2024
ನಿತ್ಯ ನೀತಿ :ಕಲ್ಲಿಗೆ ಸುಂದರ ಆಕಾರ ಬರಬೇಕಾದರೆ ಉಳಿಯ ಪೆಟ್ಟು ಬೀಳಲೇಬೇಕು. ಬದುಕು ಸುಂದರವಾಗಲು ಕಷ್ಟ-ಸುಖಗಳನ್ನು ಅನುಭವಿಸಲೇಬೇಕು.
ಪಂಚಾಂಗ : ಭಾನುವಾರ , 22-09-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಕೃತ್ತಿಕಾ / ಯೋಗ: ಹರ್ಷಣ / ಕರಣ: ಗರಜೆ
ಸೂರ್ಯೋದಯ – ಬೆ.06.09ಸೂರ್ಯಾಸ್ತ – 06.16ರಾಹುಕಾಲ – 4.30-6.00ಯಮಗಂಡ ಕಾಲ – 12.00-1.30ಗುಳಿಕ ಕಾಲ – 3.00-4.30
ರಾಶಿಭವಿಷ್ಯ :ಮೇಷ: ಉದ್ಯೋಗದಲ್ಲಿ ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಅವಕಾಶಗಳಿವೆ.ವೃಷಭ: ಅಮೂಲ್ಯ ವಸ್ತುವಿನ ಕಳ್ಳತನವಾಗಲಿದೆ.ಮಿಥುನ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದು ಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಕಟಕ: ಮಕ್ಕಳಿಂದ ಸಂತಸ ಸಿಗಲಿದೆ.ಸಿಂಹ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಬಹಳ ಒಳಿತು.ಕನ್ಯಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ.
ತುಲಾ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದು ಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.ವೃಶ್ಚಿಕ: ಬುದ್ಧಿಹೀನರಾಗಿ ವರ್ತಿಸುವಿರಿ. ಉಪನ್ಯಾಸಕ ವೃತ್ತಿಯವರಿಗೆ ನಷ್ಟ.ಧನುಸ್ಸು: ಹೊಸ ಜನರ ಸಂಪರ್ಕ ಮಾಡಿಕೊಳ್ಳುವ ಅಭ್ಯಾಸ ರೂಢಿಸಿಕೊಳ್ಳಿ.
ಮಕರ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.ಕುಂಭ: ಪತ್ನಿ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.ಮೀನ: ಅಜೀರ್ಣ ಮತ್ತು ಉದರಕ್ಕೆ ಸಂಬಂಧಿಸಿದ ಅನಾರೋಗ್ಯ ಎದುರಾಗಲಿದೆ.