ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-09-2024)
'  - 17-09-2024
ನಿತ್ಯ ನೀತಿ :ಎಲ್ಲರನ್ನೂ ಸಂತೋಷಪಡಿಸಲು ನಮಗೆ ಸಾಧ್ಯವಾಗದೆ ಇರಬಹುದು. ಆದರೆ, ಎಲ್ಲರೊಂದಿಗೆ ಸಂತೋಷದಿಂದಿರುವುದು ನಮ ನಿರ್ಧಾರಕ್ಕೆ ಬಿಟ್ಟಿರುವುದಾಗಿದೆ.
ಪಂಚಾಂಗ : ಮಂಗಳವಾರ, 17-09-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಶತಭಿಷಾ / ಯೋಗ: ಧೃತಿ-ಶೂಲ / ಕರಣ: ವಿಷ್ಠಿ
ಸೂರ್ಯೋದಯ – ಬೆ.06.09ಸೂರ್ಯಾಸ್ತ – 06.19ರಾಹುಕಾಲ – 3.00-4.30ಯಮಗಂಡ ಕಾಲ – 9.00-10.30ಗುಳಿಕ ಕಾಲ – 12.00-1.30
ರಾಶಿಭವಿಷ್ಯ :ಮೇಷ: ಕಚೇರಿ ಕೆಲಸವನ್ನು ಮನಃಪೂರ್ವಕವಾಗಿ ಮಾಡಿ. ಅನ್ಯರಿಗೆ ಉಪಕಾರ ಮಾಡುವಿರಿ.ವೃಷಭ: ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುವ ನೀವು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.ಮಿಥುನ: ಬಂಧುಗಳನ್ನು ವಿನಾಕಾರಣ ದ್ವೇಷಿಸುವಿರಿ.
ಕಟಕ: ಶತ್ರುಗಳನ್ನು ಜಯಿಸು ವಿರಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ.ಸಿಂಹ: ಉನ್ನತ ಅಧಿ ಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗುವುದು.ಕನ್ಯಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ತುಲಾ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ.ವೃಶ್ಚಿಕ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.ಧನುಸ್ಸು: ಸಮಾಧಾನದಿಂದ ಕಾರ್ಯನಿರ್ವಹಿಸಿದರೆ ಜಯ ಕಟ್ಟಿಟ್ಟ ಬುತ್ತಿ ಎಂಬ ಅರಿವು ಇರಲಿ.
ಮಕರ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.ಕುಂಭ: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.ಮೀನ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.