ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-10-2023)
ನಿತ್ಯ ನೀತಿ :ಅಧಿಕಾರದ ಲಾಲಸೆ ಬಂದಾಗ ಆತ್ಮೀಯರಾಗಲಿ, ಬಂಧು-ಬಳಗದವರಾಗಲಿ ತನಗಿಂತ ಕೀಳೆಂಬ ಭಾವ ಬೇರೂರಲು ತೊಡಗಿಸುತ್ತದೆ.
ಪಂಚಾಂಗ ಮಂಗಳವಾರ 03-10-2023ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಕೃತ್ತಿಕಾ / ಯೋಗ: ವಜ್ರ / ಕರಣ: ಕೌಲವ
ಸೂರ್ಯೋದಯ : ಬೆ.06.09ಸೂರ್ಯಾಸ್ತ : 06.09ರಾಹುಕಾಲ : 3.00-4.30ಯಮಗಂಡ ಕಾಲ : 9.00-10.30ಗುಳಿಕ ಕಾಲ : 12.00-1.30
ರಾಶಿ ಭವಿಷ್ಯಮೇಷ: ವಿರೋಧಿಗಳಿಂದ ತೊಂದರೆಯಾಗಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.ವೃಷಭ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬರುವುದು ಒಳಿತು.ಮಿಥುನ: ಮಹಿಳೆಯರಿಗೆ ಅನುಕೂಲಕರ ದಿನ. ಕುಲದೇವರ ದರ್ಶನ ಮಾಡುವಿರಿ.
ಕಟಕ: ಹಂತ ಹಂತವಾಗಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ.ಸಿಂಹ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹಲವಾರು ಪ್ರಯೋಜನವಾಗಲಿವೆ.ಕನ್ಯಾ: ಗಣ್ಯ ವ್ಯಕ್ತಿಗಳ ಭೇಟಿಯಿಂದ ವ್ಯಾಪಾರ- ವ್ಯವಹಾರಗಳಿಗೆ ಅನುಕೂಲವಾಗಲಿದೆ.
ತುಲಾ: ಮನಸ್ಸಿನಲ್ಲಿ ಗೊಂದಲ ಉಂಟಾಗಲಿದೆ. ದುಶ್ಚಟಗಳಿಂದ ದೂರವಿರಿ.ವೃಶ್ಚಿಕ: ಯಾವುದೇ ಕಾರ್ಯ ಕೈಗೊಂಡರೂ ಹೆಜ್ಜೆ ಹೆಜ್ಜೆಗೂ ಅಡೆತಡೆ ಎದುರಾಗಲಿದೆ.ಧನುಸ್ಸು: ಅಣ್ಣ-ತಮ್ಮಂದಿರು ನಿಮ್ಮ ವ್ಯವಹಾರಗಳಿಗೆ ಸಾಕಷ್ಟು ಸಹಾಯ ಮಾಡುವರು.
ಮಕರ: ಹೊಸ ಜವಾಬ್ದಾರಿ ಹೊರುವ ಸಂದರ್ಭಗಳು ಎದುರಾಗಬಹುದು.ಕುಂಭ: ಮಾತಿನಲ್ಲಿ ಹಿಡಿತವಿರಲಿ. ಅನಗತ್ಯ ವಿಷಯಗಳಿಗೆ ತಲೆ ಹಾಕದಿರಿ.ಮೀನ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.