ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-10-2023)
ನಿತ್ಯ ನೀತಿ :ಯಾವ ವ್ಯಕ್ತಿಯಲ್ಲಿ ಆಶೋತ್ತರ ಭಾವನೆಗಳು ಅಧಿಕವಾಗಿರುವುದೋ ಅವನು ಕಾಲ ಮೃತ್ಯುವಿಗೆ ಹೆದರುವುದು ಸಹಜ.
ಪಂಚಾಂಗ ಶುಕ್ರವಾರ 13-10-2023ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ದಶಿ /ನಕ್ಷತ್ರ: ಉತ್ತರಾ / ಯೋಗ: ಬ್ರಹ್ಮ / ಕರಣ: ವಿಷ್ಠಿ
ಸೂರ್ಯೋದಯ : ಬೆ.06.10ಸೂರ್ಯಾಸ್ತ : 06.02ರಾಹುಕಾಲ : 10.30-12.00ಯಮಗಂಡ ಕಾಲ : 3.00-4.30ಗುಳಿಕ ಕಾಲ : 7.30-9.00
ರಾಶಿ ಭವಿಷ್ಯಮೇಷ: ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೆ ಮುಂದೆ ಯೋಚಿಸಬೇಡಿ. ಆತ್ಮೀಯರಿಂದ ಸಹಾಯ ಸಿಗಲಿದೆ.ವೃಷಭ: ಮಾನಸಿಕ ಒತ್ತಡ ಹೆಚ್ಚಾಗುವುದು. ಕೆಲಸ-ಕಾರ್ಯಗಳನ್ನು ಆದಷ್ಟು ಬೇಗ ಮುಗಿಸಿ.ಮಿಥುನ: ಅಭಿವೃದ್ಧಿಯಲ್ಲಿ ಹಲವು ಅಡೆತಡೆಗಳು ಎದುರಾಗಲಿವೆ. ಆಯಾಸ ಹೆಚ್ಚಾಗಲಿದೆ.
ಕಟಕ: ಅನಗತ್ಯ ಖರ್ಚು-ವೆಚ್ಚಗಳಿಗೆ ಕಡಿವಾಣ ಹಾಕುವುದರಿಂದ ಆರ್ಥಿಕ ಸಂಕಷ್ಟ ಕಡಿಮೆಯಾಗಲಿದೆ.ಸಿಂಹ: ಅಧಿಕ ಆತ್ಮವಿಶ್ವಾಸ ದಿಂದ ಸಾಮಥ್ರ್ಯಕ್ಕಿಂತ ಹೆಚ್ಚು ಕೆಲಸ ಮಾಡುವಿರಿ.ಕನ್ಯಾ:ಯಾವುದೇ ಕಾರ್ಯ ಕೈಗೊಂಡರೂ ಹೆಜ್ಜೆ ಹೆಜ್ಜೆಗೂ ಅಡೆತಡೆ ಎದುರಾಗಲಿದೆ.
ತುಲಾ: ಅಮೂಲ್ಯ ವಸ್ತುಗಳ ಖರೀದಿಗೆ ಇಂದು ಉತ್ತಮವಾದ ದಿನ.ವೃಶ್ಚಿಕ: ಮಧ್ಯವರ್ತಿಗಳ ಸಹಾಯದಿಂದ ವಿವಾಹದ ವಿಷಯದಲ್ಲಿ ಅನುಕೂಲಕರವಾಗಲಿದೆ.ಧನುಸ್ಸು: ಕುಟುಂಬದವರೊಂದಿಗೆ ಸಾಕಷ್ಟು ಸಮಯ ಕಳೆಯಲು ಬಯಸುವಿರಿ.
ಮಕರ: ಪಿತ್ರಾರ್ಜಿತ ಆಸ್ತಿ ವಿವಾದ ತಾರಕಕ್ಕೇರಲಿದೆ. ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ.ಕುಂಭ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.ಮೀನ: ಅದೃಷ್ಟ ನಿಮ್ಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.