ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-09-2024)

ನಿತ್ಯ ನೀತಿ :ಸಮಯ ಎಲ್ಲರಿಗೂ ಸಿಗುತ್ತದೆ ಜೀವನ ಬದಲಿಸಲು, ಆದರೆ ಜೀವನ ಪುನಃ ಸಿಗದು ಸಮಯವನ್ನು ಬದಲಿಸಲು.
ಪಂಚಾಂಗ : ಭಾನುವಾರ , 01-09-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಆಶ್ಲೇಷಾ / ಯೋಗ: ಪರಿಘ / ಕರಣ: ವಿಷ್ಠಿ
ಸೂರ್ಯೋದಯ – ಬೆ.06.09ಸೂರ್ಯಾಸ್ತ – 06.30ರಾಹುಕಾಲ – 4.30-6.00ಯಮಗಂಡ ಕಾಲ – 12.00-1.30ಗುಳಿಕ ಕಾಲ – 3.00-4.30
ರಾಶಿಭವಿಷ್ಯ:ಮೇಷ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ವಾಹನ ಖರೀದಿಸುವ ಸಾಧ್ಯತೆ ಇದೆ.ವೃಷಭ: ಹಿರಿಯ ವಿದ್ವಾಂಸರಿಗೆ ಗೌರವ ಸಿಗುತ್ತದೆ. ನಿರೀಕ್ಷಿತ ಮಟ್ಟಕ್ಕಿಂತ ಆದಾಯ ಹೆಚ್ಚಿರುತ್ತದೆ.ಮಿಥುನ: ಇನ್ನೊಬ್ಬರ ಮಾತುಗಳನ್ನು ಆಲಿಸಿ ತೀರ್ಮಾನಕ್ಕೆ ಬರುವುದು ಅನಿರ್ವಾಯವಾಗಲಿದೆ.
ಕಟಕ: ಸ್ವಂತ ಉದ್ಯೋಗ ಮಾಡುವವರಿಗೆ ಲಾಭ ಹೆಚ್ಚುತ್ತದೆ. ಆತ್ಮಗೌರವಕ್ಕೆ ಹೆಚ್ಚು ಬೆಲೆ ಕೊಡುವಿರಿ.ಸಿಂಹ: ಮಕ್ಕಳಿಂದ ನೆಮ್ಮದಿ ಸಿಗಲಿದೆ. ವ್ಯಾಪಾರ- ವ್ಯವಹಾರದಲ್ಲಿ ಲಾಭ.ಕನ್ಯಾ:ಸೌಜನ್ಯದಿಂದ ನಡೆದು ಕೊಳ್ಳುವುದರಿಂದ ನೆರೆಹೊರೆ ಯವರು ನಿಮ್ಮ ಕಷ್ಟಗಳಿಗೆ ಸ್ಪಂದಿಸುವರು. ಭಜನೆಯಿಂದ ನೆಮ್ಮದಿ ಸಿಗಲಿದೆ.
ತುಲಾ: ಸೋದರನ ಆಗಮನ ದಿಂದ ಮನೆಯಲ್ಲಿ ಹೆಚ್ಚಿನ ಸಂಭ್ರಮ ಮೂಡಲಿದೆ.ವೃಶ್ಚಿಕ: ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ಚೆನ್ನಾಗಿರುವುದು.ಧನುಸ್ಸು: ನಿಮ್ಮ ಮೇಲಿದ್ದ ಆಪಾದನೆಗಳು ದೂರಾಗಿ ಮೇಲಧಿ ಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ.
ಮಕರ: ದೂರ ಪ್ರಯಾಣವನ್ನು ಸಾಧ್ಯವಾದಷ್ಟು ಮುಂದೂಡುವುದು ಉತ್ತಮ.ಕುಂಭ: ಹಣಕಾಸಿನ ವ್ಯತ್ಯಾಸಗಳಾಗಿ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ.ಮೀನ: ಇತರರೊಂದಿಗೆ ಸೇರಿ ಮಾಡುವ ಕೆಲಸ- ಕಾರ್ಯಗಳಲ್ಲಿ ಉತ್ತಮ ಲಾಭ ದೊರೆಯಲಿದೆ.