ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-09-2024)

ನಿತ್ಯ ನೀತಿ :ಮನೆ ಕಟ್ಟಲು ಹಣ ಬೇಕು, ಮನಸ್ಸು ಕಟ್ಟಲು ಗುಣ ಬೇಕು.ಹಣದಿಂದ ಕಟ್ಟಿದ ಮನೆಯಲ್ಲಿ ಎಲ್ಲರೂ ಇರುತ್ತಾರೆ. ಆದರೆ, ಗುಣದಿಂದ ಕಟ್ಟಿದ ಮನೆಯಲ್ಲಿ ಯೋಗ್ಯರಷ್ಟೇ ನೆಲೆಸುತ್ತಾರೆ.
ಪಂಚಾಂಗ : ಮಂಗಳವಾರ, 10-09-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಅನುರಾಧಾ / ಯೋಗ: ವಿಷ್ಕಂಭ / ಕರಣ: ಗರಜಸೂರ್ಯೋದಯ – ಬೆ.06.09ಸೂರ್ಯಾಸ್ತ – 06.24ರಾಹುಕಾಲ – 3.00-4.30ಯಮಗಂಡ ಕಾಲ – 9.00-10.30ಗುಳಿಕ ಕಾಲ – 12.00-1.30
ರಾಶಿಭವಿಷ್ಯ:ಮೇಷ: ಕಚೇರಿ ಕೆಲಸವನ್ನು ನಿಷ್ಠೆಯಿಂದ ಮಾಡು ವಿರಿ. ಅನ್ಯರಿಗೆ ಉಪಕಾರ ಮಾಡಲು ಮುಂದಾಗಿ.ವೃಷಭ: ಉನ್ನತ ಶಿಕ್ಷಣದಲ್ಲಿ ಯಶಸ್ಸು ಸಾಧಿಸು ವಿರಿ. ಗಣ್ಯ ವ್ಯಕ್ತಿಗಳನ್ನು ಭೇಟಿ ಮಾಡುವಿರಿ.ಮಿಥುನ: ಮೋಜು-ಮಸ್ತಿಯಲ್ಲಿ ತೊಡಗುವಿರಿ.
ಕಟಕ: ಸಣ್ಣಪುಟ್ಟ ವಿಷಯಗಳಿಗೂ ಹೆಚ್ಚಿನ ಮಹತ್ವ ಕೊಡುವಿರಿ. ಮಕ್ಕಳಿಂದ ಸಂತಸ ಸಿಗಲಿದೆ.ಸಿಂಹ: ಪತ್ನಿ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.ಕನ್ಯಾ:ಅಂದುಕೊಂಡಿದ್ದ ಕೆಲಸಗಳು ಉತ್ತಮವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.
ತುಲಾ: ಹಣದ ಕೊರತೆ ಇರುವುದಿಲ್ಲ. ಕಠಿಣ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ.ವೃಶ್ಚಿಕ: ಉಪನ್ಯಾಸಕ ವೃತ್ತಿಯವರಿಗೆ ನಷ್ಟ.ಧನುಸ್ಸು: ಹೊಸ ಜನರ ಸಂಪರ್ಕ ಮಾಡಿಕೊಳ್ಳುವ ಅಭ್ಯಾಸವನ್ನು ರೂಢಿಸಿಕೊಳ್ಳಿ.
ಮಕರ: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.ಕುಂಭ: ಅಜೀರ್ಣ ಮತ್ತು ಉದರಕ್ಕೆ ಸಂಬಂಧಿಸಿದ ಅನಾರೋಗ್ಯ ಎದುರಾಗಲಿದೆ.ಮೀನ: ಮಹಿಳೆಯರಿಗೆ ಆಭರಣ ಸಿಗಲಿದೆ. ಬಂಧುಗಳ ಸಹಾಯ-ಸಹಕಾರ ದೊರೆಯುವುದು.