ಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ (04-09-2024)

ನಿತ್ಯ ನೀತಿ :ಎಷ್ಟೇ ಬುದ್ಧಿವಂತ ಜನರ ಜತೆ ಕುಳಿತರೂ ಮನುಷ್ಯನಿಗೆ ಮೂರ್ಖನಾದ ನಂತರವೇ ಅನುಭವ ಸಿಗುವುದು..!
ಪಂಚಾಂಗ : 04-09-2024, ಬುಧವಾರಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಉತ್ತರಾಭಾದ್ರ / ಯೋಗ: ಸಾಧ್ಯ / ಕರಣ: ಬಾಲವ
ಸೂರ್ಯೋದಯ – ಬೆ.06.09ಸೂರ್ಯಾಸ್ತ – 06.28ರಾಹುಕಾಲ – 12.00-1.30ಯಮಗಂಡ ಕಾಲ – 7.30-9.00ಗುಳಿಕ ಕಾಲ – 10.30-12.00
ರಾಶಿಭವಿಷ್ಯ:ಮೇಷ: ಇನ್ನೊಬ್ಬರ ಮಾತುಗಳನ್ನು ಆಲಿಸಿ ತೀರ್ಮಾನಕ್ಕೆ ಬರುವುದು ಅನಿರ್ವಾಯವಾಗಲಿದೆ.ವೃಷಭ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ವಾಹನ ಖರೀದಿಸುವ ಸಾಧ್ಯತೆ ಇದೆ.ಮಿಥುನ: ಹಿರಿಯ ವಿದ್ವಾಂಸರಿಗೆ ಗೌರವ ಸಿಗುತ್ತದೆ. ನಿರೀಕ್ಷಿತ ಮಟ್ಟಕ್ಕಿಂತ ಆದಾಯ ಹೆಚ್ಚಿರುತ್ತದೆ.
ಕಟಕ: ಸ್ವಂತ ಉದ್ಯೋಗ ಮಾಡುವವರಿಗೆ ಲಾಭ ಹೆಚ್ಚುತ್ತದೆ. ಆತ್ಮಗೌರವಕ್ಕೆ ಹೆಚ್ಚು ಬೆಲೆ ಕೊಡುವಿರಿ.ಸಿಂಹ: ಯೋಗಾಭ್ಯಾಸದಿಂದ ಆರೋಗ್ಯ ಚೆನ್ನಾಗಿರುವುದು.ಕನ್ಯಾ:ಮಕ್ಕಳಿಂದ ನೆಮ್ಮದಿ ಸಿಗಲಿದೆ. ವ್ಯಾಪಾರ- ವ್ಯವಹಾರದಲ್ಲಿ ಲಾಭ.
ತುಲಾ: ಸೋದರನ ಆಗಮನ ದಿಂದ ಮನೆಯಲ್ಲಿ ಹೆಚ್ಚಿನ ಸಂಭ್ರಮ ಮೂಡಲಿದೆ.ವೃಶ್ಚಿಕ: ಸೌಜನ್ಯದಿಂದ ನಡೆದು ಕೊಳ್ಳುವುದರಿಂದ ನೆರೆಹೊರೆ ಯವರು ನಿಮ್ಮ ಕಷ್ಟಗಳಿಗೆ ಸ್ಪಂದಿಸುವರು. ಭಜನೆಯಿಂದ ನೆಮ್ಮದಿ ಸಿಗಲಿದೆ.ಧನುಸ್ಸು: ನಿಮ್ಮ ಮೇಲಿದ್ದ ಆಪಾದನೆಗಳು ದೂರಾಗಿ ಮೇಲಧಿ ಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ.
ಮಕರ: ಇತರರೊಂದಿಗೆ ಸೇರಿ ಮಾಡುವ ಕೆಲಸ- ಕಾರ್ಯಗಳಲ್ಲಿ ಉತ್ತಮ ಲಾಭ ದೊರೆಯಲಿದೆ.ಕುಂಭ: ಹಣಕಾಸಿನ ವ್ಯತ್ಯಾಸಗಳಾಗಿ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ.ಮೀನ: ದೂರ ಪ್ರಯಾಣವನ್ನು ಸಾಧ್ಯವಾದಷ್ಟು ಮುಂದೂಡುವುದು ಉತ್ತಮ.