ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (26-08-2024)
ನಿತ್ಯ ನೀತಿ :ಸತ್ಯಕ್ಕಾಗಿ ಯಾವುದನ್ನು ಬೇಕಾದರೂ ತ್ಯಾಗ ಮಾಡಿ. ಆದರೆ, ಯಾವುದಕ್ಕೂ ಸತ್ಯವನ್ನು ತ್ಯಾಗ ಮಾಡಬೇಡಿ.
ಪಂಚಾಂಗ : ಸೋಮವಾರ, 26-08-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಕೃತ್ತಿಕಾ / ಯೋಗ: ವ್ಯಾಘಾತ / ಕರಣ: ಬಾಲವ
ಸೂರ್ಯೋದಯ – ಬೆ.06.08ಸೂರ್ಯಾಸ್ತ – 06.34ರಾಹುಕಾಲ – 7.30-9.00ಯಮಗಂಡ ಕಾಲ – 10.30-12.00ಗುಳಿಕ ಕಾಲ – 1.30-3.00
ರಾಶಿಭವಿಷ್ಯ :ಮೇಷ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.ವೃಷಭ:ಸಣ್ಣ ವಿಷಯಕ್ಕೆ ಕಲಹ.ಮಿಥುನ: ತಳುಕಿನ ಮಾತಿಗೆ ಮರುಳಾಗದಿರಿ.
ಕಟಕ: ಬಾಕಿ ವಸೂಲಿ ಮಾಡುವಿರಿ.ಸಿಂಹ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.ಕನ್ಯಾ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ತುಲಾ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.ಧನುಸ್ಸು: ದೂರ ಪ್ರಯಾಣ ಮಾಡುವಿರಿ.
ಮಕರ: ಹಣಕಾಸು ವ್ಯವಹಾರದಲ್ಲಿ ಜಾಗರೂಕತೆಯಿಂದ ಇರಿ.ಕುಂಭ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.ಮೀನ: ಮನಸ್ತಾಪ ತಪ್ಪಿಸಲು ಸಹೋದರರೊಂದಿಗೆ ಅತ್ಯಂತ ಜಾಣ್ಮೆಯಿಂದ ವ್ಯವಹರಿಸುವುದು ಒಳಿತು.