ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-08-2024)
ನಿತ್ಯ ನೀತಿ :ನಾವು ಮಾಡುವ ಕೆಲಸ, ಗಳಿಸಿದ ಹಣ, ಹೆಸರು ನಮ್ಮ ಆತ್ಮಾಭಿಮಾನಕ್ಕಷ್ಟೇ ಕಾರಣ ಆಗ್ಬೇಕೆ ಹೊರತು ಅಹಂಕಾರಕ್ಕಲ್ಲ.
ಪಂಚಾಂಗ : ಭಾನುವಾರ , 25-08-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಭರಣಿ / ಯೋಗ: ಧ್ರುವ / ಕರಣ: ವಿಷ್ಠಿ
ಸೂರ್ಯೋದಯ – ಬೆ.06.08ಸೂರ್ಯಾಸ್ತ – 06.35ರಾಹುಕಾಲ – 4.30-6.00ಯಮಗಂಡ ಕಾಲ – 12.00-1.30ಗುಳಿಕ ಕಾಲ – 3.00-4.30
ರಾಶಿಭವಿಷ್ಯ:ಮೇಷ:ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.ವೃಷಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.
ಕಟಕ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.ಕನ್ಯಾ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ತುಲಾ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.ಧನುಸ್ಸು: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಮಕರ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.ಮೀನ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.