ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-08-2024)
ನಿತ್ಯ ನೀತಿ :ದೇವರು ವರನ್ನೂ ಕೊಡುವುದಿಲ್ಲ, ಶಾಪವನ್ನೂ ಕೊಡುವುದಿಲ್ಲ. ಅವಕಾಶವನ್ನು ಮಾತ್ರ ಕೊಡುತ್ತಾನೆ. ಅದನ್ನು ವರವೋ, ಶಾಪವೋ ಆಗಿ ಪರಿವರ್ತಿಸುವುದು ನಮ ಕೈಯಲ್ಲಿದೆ.
ಪಂಚಾಂಗ : 07-08-2024, ಬುಧವಾರಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಪರಿಘ /ಕರಣ: ತೈತಿಲ
ಸೂರ್ಯೋದಯ – ಬೆ.06.06ಸೂರ್ಯಾಸ್ತ – 06.44ರಾಹುಕಾಲ – 12.00-1.30ಯಮಗಂಡ ಕಾಲ – 7.30-9.00ಗುಳಿಕ ಕಾಲ – 10.30-12.00
ರಾಶಿಭವಿಷ್ಯ:ಮೇಷ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.ವೃಷಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.
ಕಟಕ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.ಸಿಂಹ: ಮಕ್ಕಳಿಂದ ಸಂತೋಷ ಉಂಟಾಗುವುದು.ಕನ್ಯಾ: ಹಿತಶತ್ರುಗಳಿಂದ ದೂರವಿರು.
ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.ವೃಶ್ಚಿಕ: ವ್ಯಾಪಾರದಲ್ಲಿ ಲಾಭವಿದೆ.ಧನುಸ್ಸು: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.ಮೀನ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.