ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-08-2024)
ನಿತ್ಯ ನೀತಿ :ಸಂತೋಷದಿಂದ ಇರುವವರ ಹತ್ತಿರ ಎಲ್ಲವೂ ಇರುತ್ತದೆ ಅಂತಲ್ಲ. ಇದ್ದುದ್ದರಲ್ಲೇ ತೃಪ್ತಿ ಕಾಣುವ ಗುಣವೇ ಅವರ ಸಂತೋಷಕ್ಕೆ ಕಾರಣ.
ಪಂಚಾಂಗ : ಮಂಗಳವಾರ , 06-08-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಮಘಾ / ಯೋಗ: ವರೀಯಾನ್ /ಕರಣ: ಬಾಲವ
ಸೂರ್ಯೋದಯ – ಬೆ.06.06ಸೂರ್ಯಾಸ್ತ – 06.45ರಾಹುಕಾಲ – 3.00-4.30ಯಮಗಂಡ ಕಾಲ – 9.00-10.30ಗುಳಿಕ ಕಾಲ – 12.00-1.30
ರಾಶಿಭವಿಷ್ಯ :ಮೇಷ: ಉದ್ಯೋಗದಲ್ಲಿ ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಅವಕಾಶಗಳಿವೆ.ವೃಷಭ: ಮಕ್ಕಳಿಂದ ಸಂತಸ ಸಿಗಲಿದೆ.ಮಿಥುನ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದು ಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಕಟಕ: ಅಮೂಲ್ಯ ವಸ್ತುವಿನ ಕಳ್ಳತನವಾಗಲಿದೆ.ಸಿಂಹ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಬಹಳ ಒಳಿತು.ಕನ್ಯಾ:ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ.
ತುಲಾ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದು ಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.ವೃಶ್ಚಿಕ: ಬುದ್ಧಿಹೀನರಾಗಿ ವರ್ತಿಸುವಿರಿ. ಉಪನ್ಯಾಸಕ ವೃತ್ತಿಯವರಿಗೆ ನಷ್ಟ.ಧನುಸ್ಸು: ಹೊಸ ಜನರ ಸಂಪರ್ಕ ಮಾಡಿಕೊಳ್ಳುವ ಅಭ್ಯಾಸ ರೂಢಿಸಿಕೊಳ್ಳಿ.
ಮಕರ: ಅಜೀರ್ಣ ಮತ್ತು ಉದರಕ್ಕೆ ಸಂಬಂಧಿಸಿದ ಅನಾರೋಗ್ಯ ಎದುರಾಗಲಿದೆ.ಕುಂಭ: ಪತ್ನಿ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.ಮೀನ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.