ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-07-2024)
ನಿತ್ಯ ನೀತಿ :ಎಲ್ಲವೂ ಇದ್ದು ಶಕ್ತಿಶಾಲಿಗಳೆನ್ನಿಸಿಕೊಳ್ಳುವುದು ದೊಡ್ಡದಲ್ಲ. ಎಲ್ಲವನ್ನೂ ಕಳೆದುಕೊಂಡಾಗ ತೋರುವುದೇ ನಿಜವಾದ ಶಕ್ತಿ.
ಪಂಚಾಂಗ : ಸೋಮವಾರ , 15-07-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ನವಮಿ / ನಕ್ಷತ್ರ: ಸ್ವಾತಿ / ಯೋಗ: ಸಿದ್ಧ / ಕರಣ: ಬಾಲವ
ಸೂರ್ಯೋದಯ – ಬೆ.06.01ಸೂರ್ಯಾಸ್ತ – 06.50ರಾಹುಕಾಲ – 7.30-9.00ಯಮಗಂಡ ಕಾಲ – 10.30-12.00ಗುಳಿಕ ಕಾಲ – 1.30-3.00
ರಾಶಿಭವಿಷ್ಯ :ಮೇಷ: ಹಲವು ವಿಷಯಗಳ ಬಗ್ಗೆ ಜನರು ನಿಮ್ಮಿಂದ ಸಲಹೆ-ಸೂಚನೆಗಳನ್ನು ಪಡೆಯುವರು.ವೃಷಭ: ಸ್ಥಗಿತ ಕಾರ್ಯಕ್ಕೆ ಮರು ಚಾಲನೆ ಸಿಗುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ.ಮಿಥುನ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಫಲ ಸಿಗಲಿದೆ.
ಕಟಕ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.ಸಿಂಹ: ಸುಲಭವಾಗಿ ಜೀರ್ಣ ವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.
ಕನ್ಯಾ:ಕೊಟ್ಟ ಹಣ ತಿರುಗಿ ಬರಲಿದೆ. ಜವಾಬ್ದಾರಿ ವಹಿಸಿ ಕೆಲಸ ಮಾಡಿ.ತುಲಾ: ಹಿರಿಯ ಅಧಿ ಕಾರಿಗಳ ಆಕಸ್ಮಿಕ ಭೇಟಿಯಿಂದಾಗಿ ಉದ್ಯೋಗ ಪ್ರಾಪ್ತಿಯಾಗಲಿದೆ.ವೃಶ್ಚಿಕ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ.
ಧನುಸ್ಸು: ಹಣಕಾಸಿನ ವಿಷಯದಲ್ಲಿ ಸ್ನೇಹಿತರೊಂದಿಗೆ ಚಕಮಕಿ ನಡೆಸುವಿರಿ.ಮಕರ: ತಂದೆಯ ಆರೋಗ್ಯದಲ್ಲಿ ಕೊಂಚ ಏರುಪೇರಾಗಬಹುದು. ಜಾಗ್ರತೆ ವಹಿಸಬೇಕು.ಕುಂಭ: ಸೇವೆಯ ಆಧಾರದ ಮೇಲೆ ಕೆಲಸದಲ್ಲಿ ಬಡ್ತಿ ದೊರೆಯಲಿದೆ. ಹೆಚ್ಚು ಲಾಭ ಗಳಿಸುವಿರಿ.ಮೀನ: ಬಂಧುಗಳಲ್ಲಿ ವಿಶ್ವಾಸ, ಸಂಬಂಧ ಬೆಳೆಸಿಕೊಳ್ಳುವತ್ತ ಪ್ರಯತ್ನಿಸಿ.