ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-07-2024)
ನಿತ್ಯ ನೀತಿ :ನಾವು ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದರೆ ಹೃದಯವಂತರು ಚಪ್ಪಾಳೆ ತಟ್ಟುತ್ತಾರೆ. ಹೃದಯ ಹೀನರು ಟೀಕಿಸುತ್ತಾರೆ. ಆದರೆ, ಒಳ್ಳೆಯ ಕಾರ್ಯದ ಫಲಿತಾಂಶ ಹೇಗಿರುತ್ತದೆ ಅಂದರೆ ಚಪ್ಪಾಳೆ ತಟ್ಟಿದವರೇ ಟೀಕಾಕಾರರ ಬಾಯಿ ಮುಚ್ಚಿಸುತ್ತಾರೆ. ನಾವು ಟೀಕೆಗೆ ಉತ್ತರಿಸಬೇಕಾಗಿಲ್ಲ.
ಪಂಚಾಂಗ : ಶನಿವಾರ , 13-07-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಹಸ್ತ / ಯೋಗ: ಶಿವ / ಕರಣ: ವಿಷ್ಠಿ
ಸೂರ್ಯೋದಯ – ಬೆ.06.01ಸೂರ್ಯಾಸ್ತ – 06.50ರಾಹುಕಾಲ – 9.00-10.30ಯಮಗಂಡ ಕಾಲ – 1.30-3.00ಗುಳಿಕ ಕಾಲ – 6.00-7.30
ರಾಶಿಭವಿಷ್ಯ :ಮೇಷ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.ವೃಷಭ: ಮನೆಗೆ ಹೊಸ ಅತಿಥಿಯೊಬ್ಬರ ಸೇರ್ಪಡೆ ಯಾಗುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ.ಮಿಥುನ: ಪ್ರಿಂಟಿಂಗ್ ವ್ಯಾಪಾರಿಗಳಿಗಗೆ ನಿರೀಕ್ಷಿತ ಆದಾಯ ಸಿಗಲಿದೆ.
ಕಟಕ:ಸಹೋದರರು ಆರ್ಥಿಕವಾಗಿ ಸಹಾಯ ಮಾಡುವರು.ಸಿಂಹ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.ಕನ್ಯಾ:ಉದ್ಯೋಗದ ಕಡೆಗೆ ಹೆಚ್ಚಿನ ಗಮನಹರಿಸಿ. ಖರ್ಚು ಹೆಚ್ಚಾಗಲಿದೆ.
ತುಲಾ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ.ವೃಶ್ಚಿಕ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.ಧನುಸ್ಸು: ಧಾರ್ಮಿಕ ಕಾರ್ಯಗಳತ್ತ ಗಮನ ಹರಿಸುವಿರಿ. ಕೀರ್ತಿ ನಿಮ್ಮನ್ನು ಅರಸಿ ಬರಲಿದೆ.
ಮಕರ: ಉದ್ಯೋಗಸ್ಥ ಮಹಿಳೆಯರಿಗೆ ಶುಭ ದಿನ. ಕೃಷಿಕರಿಗೆ ಶುಭಫಲ ಸಿಗಲಿದೆ. ಉದ್ಯೋಗದಲ್ಲಿ ಲಾಭ.ಕುಂಭ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.ಮೀನ: ಕೆಲಸ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.