ಇಂದಿನ  ಪಂಚಾಂಗ ಮತ್ತು ರಾಶಿಭವಿಷ್ಯ (30-06-2024)
ನಿತ್ಯ ನೀತಿ :ನಮಗಾದ ನೋವನ್ನು ಶಕ್ತಿಯಾಗಿ ಪರಿವರ್ತಿಸಿಕೊಳ್ಳಬೇಕು. ಆಗ ನಮಗೆ ನೋವುಂಟು ಮಾಡುವ ಮುನ್ನ ಜನರು ನೂರು ಬಾರಿ ಯೋಚಿಸುತ್ತಾರೆ.
ಪಂಚಾಂಗ : ಭಾನುವಾರ, 30-06-2024ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ರೇವತಿ / ಯೋಗ: ಅತಿಗಂಡ / ಕರಣ: ವಣಿಜ್
ಸೂರ್ಯೋದಯ – ಬೆ.05.57ಸೂರ್ಯಾಸ್ತ – 06.50ರಾಹುಕಾಲ – 4.30-6.00ಯಮಗಂಡ ಕಾಲ – 12.00-1.30ಗುಳಿಕ ಕಾಲ – 3.00-4.30
ರಾಶಿಭವಿಷ್ಯ :ಮೇಷ: ಆದಾಯ ಹೆಚ್ಚಿಸುವ ಕೆಲಸ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.ವೃಷಭ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ವಾಹನ ಖರೀದಿಸುವ ಸಾಧ್ಯತೆ ಇದೆ.ಮಿಥುನ: ಮಕ್ಕಳ ಓದಿನ ಬಗ್ಗೆ ಕಾಳಜಿ ಇರಲಿ.
ಕಟಕ: ವಸಾ್ತ್ರಭರಣ ಖರೀದಿಸುವ ಸಾಧ್ಯತೆ ಇದೆ.ಸಿಂಹ:ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.ಕನ್ಯಾ: ಬದಲಾದ ಸನ್ನಿವೇಶಕ್ಕೆ ಒಗ್ಗಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಲಿದೆ.
ತುಲಾ: ಉನ್ನತ ಅಕಾರಿಗಳು ನಿಮ್ಮ ಮೇಲೆ ಕೋಪಗೊಳ್ಳು ವರು. ಎಚ್ಚರಿಕೆಯಿಂದಿರಿ.ವೃಶ್ಚಿಕ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.ಧನುಸ್ಸು: ಉದ್ಯೋಗ ಬದಲಾವಣೆಗೆ ಉತ್ತಮ ಸಮಯ ಮತ್ತು ಹೊಸ ಅವಕಾಶಗಳು ಸಿಗಲಿವೆ.
ಮಕರ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ಒದಗುತ್ತವೆ.ಕುಂಭ: ಯೋಚಿಸುವ ಪ್ರತಿಯೊಂದು ಕೆಲಸ- ಕಾರ್ಯಗಳು ವಿಳಂಬ ರೀತಿಯಲ್ಲಿ ನಡೆಯಲಿವೆ.ಮೀನ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವ ಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.