ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-06-2024)
ನಿತ್ಯ ನೀತಿ :ಒಂದು ಹೂವು ಮತ್ತೊಂದು ಹೂವಿನೊಂದಿಗೆ ಸ್ಪರ್ಧೆಗಿಳಿಯುವುದಿಲ್ಲ. ಸುಂದರವಾಗಿ ಅರಳುವುದಷ್ಟೇ ಅವುಗಳ ಕೆಲಸ.ನಮ ವ್ಯಕ್ತಿತ್ವವೂ ಹಾಗೇ ಇರಬೇಕು.
ಪಂಚಾಂಗ : ಗುರುವಾರ , 20-06-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಅನುರಾಧಾ / ಯೋಗ: ಸಾಧ್ಯ / ಕರಣ: ಗರಜೆ
ಸೂರ್ಯೋದಯ – ಬೆ.05.55ಸೂರ್ಯಾಸ್ತ – 06.48ರಾಹುಕಾಲ – 1.30-3.00ಯಮಗಂಡ ಕಾಲ – 6.00-7.30ಗುಳಿಕ ಕಾಲ – 9.00-10.30
ರಾಶಿಭವಿಷ್ಯ :ಮೇಷ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚಿನ ಪರಿಶ್ರಮ ವಹಿಸಬೇಕಾಗುತ್ತದೆ.ವೃಷಭ: ಶತ್ರುಕಾಟದಿಂದ ಮುಕ್ತಿ ದೊರೆಯಲಿದೆ. ಪ್ರಭಾವಿಗಳೊಂದಿಗೆ ಸಂಪರ್ಕ ಬೆಳೆಸುವಿರಿ.ಮಿಥುನ: ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಯೊಂದಿಗೆ ಮಾತುಕತೆ ನಡೆಸುವಿರಿ.
ಕಟಕ: ಎಲ್ಲಾ ವಿಚಾರಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಒಳ್ಳೆಯದು.ಸಿಂಹ: ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ಹಿರಿಯರ ಸಲಹೆ ಪಡೆಯಿರಿ.ಕನ್ಯಾ:ಕುಟುಂಬದ ಅಗತ್ಯ ಗಳನ್ನು ಪೂರೈಸುವುದರಲ್ಲೇ ಹೆಚ್ಚು ಸಮಯ ಕಳೆಯುವಿರಿ.
ತುಲಾ: ಹೊಸ ಹುದ್ದೆಯಲ್ಲಿ ಗೌರವ, ಸಂತೋಷ, ಹೊಸ ರೀತಿಯ ಅನುಭವ ಸಿಗಲಿದೆ.ವೃಶ್ಚಿಕ: ಪ್ರತಿಯೊಂದು ಕೆಲಸವನ್ನು ಎಚ್ಚರಿಕೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಒಳಿತು.ಧನುಸ್ಸು: ಜವಾಬ್ದಾರಿಗಳನ್ನು ಪೂರೈಸಿ. ಖಂಡಿತವಾಗಿಯೂ ಉನ್ನತ ಮಟ್ಟಕ್ಕೆ ಏರುವಿರಿ.
ಮಕರ: ದೈನಂದಿನ ಕೆಲಸಗಳು ನಿರಾತಂಕವಾಗಿ ನಡೆಯಲಿವೆ. ಕುಟುಂಬದ ಕಡೆ ಗಮನ ಹರಿಸಿ.ಕುಂಭ: ತಲೆನೋವು, ಮೊಣಕಾಲು ನೋವು ಇತ್ಯಾದಿಗಳಿಂದ ತೊಂದರೆಗೆ ಒಳಗಾಗಬಹುದು.ಮೀನ: ಕೃಷಿ ಭೂಮಿ ಮತ್ತು ಅದಕ್ಕೆ ಸಂಬಂಧಿಸಿದ ಕೆಲಸ-ಕಾರ್ಯಗಳಿಂದ ಹೆಚ್ಚು ಲಾಭ ಗಳಿಸುವಿರಿ.