ಡಿಸೆಂಬರ್ ತಿಂಗಳಲ್ಲೂ 1.03 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ ಕೇಂದ್ರ ಸರ್ಕಾರದ ಉತ್ತೇಜನಕಾರಿ ಕ್ರಮಗಳಿಂದ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಸಂಗ್ರಹದ ಮೊತ್ತ ಎರಡನೇ ಬಾರಿ 1.03 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ. ನವದೆಹಲಿ: ಕೇಂದ್ರ ಸರ್ಕಾರದ ಉತ್ತೇಜನಕಾರಿ ಕ್ರಮಗಳಿಂದ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಸಂಗ್ರಹದ ಮೊತ್ತ ಎರಡನೇ ಬಾರಿ 1.03 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ.ಕಳೆದ ಮೂರು ತಿಂಗಳಲ್ಲಿ ಜಿಎಸ್ಟಿ ಸಂಗ್ರಹ ಮೊತ್ತ 1 ಲಕ್ಷ ಕೋಟಿ ರೂ.ಗಿಂತ ಕೆಳಗಿತ್ತು. ಆದರೆ ಕಳೆದ ನವೆಂಬರ್ ತಿಂಗಳಲ್ಲಿ ಜಿಎಸ್ಟಿ ಸಂಗ್ರಹ ಮೊತ್ತ 1.03 ಲಕ್ಷ ಕೋಟಿ ಸಗ್ರಹವಾಗಿತ್ತು. ಇದೀಗ ಡಿಸೆಂಬರ್ ತಿಂಗಳಲ್ಲೂ 1.03 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ.ಡಿಸೆಂಬರ್ 2018ರಲ್ಲಿ 97,278 ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿತ್ತು. 2019ರ ನವೆಂಬರ್ನಲ್ಲಿ ಜಿಎಸ್ಟಿ ಸಂಗ್ರಹ ಮೊತ್ತ 1,03,492 ಕೋಟಿ ರೂ.ಗೆ ಏರಿಕೆಯಾಗಿತ್ತು.ಕಳೆದ ತಿಂಗಳು ಒಟ್ಟು 1,03,184 ಕೋಟಿ ರೂ. ಜಿಎಸ್ ಟಿ ಸಂಗ್ರಹವಾಹಿದ್ದು, ಇದರಲ್ಲಿ ಸಿಜಿಎಸ್ಟಿ 19,962 ಕೋಟಿ ರೂ., ಎಸ್ಜಿಎಸ್ಟಿ 26,792 ಕೋಟಿ ರೂ., ಐಜಿಎಸ್ಟಿ 48,099 ಕೋಟಿ ರೂ.(ಆಮದು ಮೇಲಿನ ಸುಂಕ 20,948 ಕೋಟಿ ರೂ. ಸೇರಿ) ಮತ್ತು ಸೆಸ್ 8,331 ಕೋಟಿ ರೂ.( ಆಮದು ಮೇಲಿನ ಸುಂಕ 869 ಕೋಟಿ ರೂ. ಸೇರಿ) ಸಂಗ್ರಹವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.2017ರ ಜುಲೈನಲ್ಲಿ ಜಿಎಸ್ಟಿ ಜಾರಿಯಾದಾಗಿನಿಂದ 9ನೇ ಬಾರಿಗೆ ಜಿಎಸ್ಟಿ ಸಂಗ್ರಹ ಮೊತ್ತ ಒಂದು ಲಕ್ಷ ಕೋಟಿ ರೂ. ದಾಟಿದೆ. ಅಲ್ಲದೆ, ನವೆಂಬರ್ ಮೂರನೇ ಅತಿಹೆಚ್ಚು ಜಿಎಸ್ಟಿ ಸಂಗ್ರಹ ತಿಂಗಳಾಗಿದೆ. 2019 ಮಾರ್ಚ್ ಮತ್ತು ಏಪ್ರಿಲ್ನಲ್ಲಿ ಅತಿ ಹೆಚ್ಚು ಜಿಎಸ್ಟಿ ಸಂಗ್ರಹವಾಗಿತ್ತು.