ಆರ್ ಬಿಐ ವಿತ್ತೀಯ ನೀತಿ ಪ್ರಕಟ: ಸತತ 9ನೇ ಬಾರಿ ರೆಪೊ ದರ ಯಥಾಸ್ಥಿತಿ ಮುಂದುವರಿಕೆ ದೇಶದಲ್ಲಿ ಕೊರೋನಾ ಮೂರನೇ ಅಲೆಯ ಆತಂಕ, ಆರ್ಥಿಕ ಅನಿಶ್ಚಿತತೆ ಮಧ್ಯೆ ಹೊಸ ರೂಪಾಂತರಿ ಕೊರೋನಾ ಓಮಿಕ್ರಾನ್ ಭಯ ಹೆಚ್ಚಾಗಿದೆ. ಈ ಮಧ್ಯೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ() ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟವಾಗಿದೆ. ಸತತ 9ನೇ ಬಾರಿಗೆ ರೆಪೊ( ) ಮತ್ತು ರಿವರ್ಸ್ ರೆಪೊ ದರವನ್ನು( ) ಬದಲಿಸದೆ ಯಥಾಸ್ಥಿತಿ ಮುಂದುವರಿಸಿದೆ. ಮುಂಬೈ: ದೇಶದಲ್ಲಿ ಕೊರೋನಾ ಮೂರನೇ ಅಲೆಯ ಆತಂಕ, ಆರ್ಥಿಕ ಅನಿಶ್ಚಿತತೆ ಮಧ್ಯೆ ಹೊಸ ರೂಪಾಂತರಿ ಕೊರೋನಾ ಓಮಿಕ್ರಾನ್ ಭಯ ಹೆಚ್ಚಾಗಿದೆ. ಈ ಮಧ್ಯೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ() ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟವಾಗಿದೆ. ಸತತ 9ನೇ ಬಾರಿಗೆ ರೆಪೊ( ) ಮತ್ತು ರಿವರ್ಸ್ ರೆಪೊ ದರವನ್ನು( ) ಬದಲಿಸದೆ ಯಥಾಸ್ಥಿತಿ ಮುಂದುವರಿಸಿದೆ. ಪ್ರಸಕ್ತ ಹಣಕಾಸು ವರ್ಷದ ತ್ರೈಮಾಸಿಕದಲ್ಲಿಯೂ ರೆಪೊ ದರ ಶೇಕಡಾ 4ರಷ್ಟು ಮತ್ತು ರಿವರ್ಸ್ ರೆಪೊ ದರ ಶೇಕಡಾ 3.35ರಷ್ಟು ಮುಂದುವರಿಯಲಿದೆ. ವಿತ್ತೀಯ ನೀತಿ ಸಮಿತಿ ಸದಸ್ಯರು ರೆಪೊ ದರವನ್ನು ಬದಲಿಸದೆ ಯಥಾಸ್ಥಿತಿ ಮುಂದುವರಿಸಲು ಒಲವು ತೋರಿಸಿದರು ಎಂದು ಸುದ್ದಿಗೋಷ್ಠಿಯಲ್ಲಿ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.ಆರ್‌ಬಿಐ 2021-22 (ಎಫ್‌ವೈ 22) ಹಣಕಾಸು ವರ್ಷದಲ್ಲಿ ಜಿಡಿಪಿ (ಒಟ್ಟು ದೇಶೀಯ ಉತ್ಪನ್ನ) ಬೆಳವಣಿಗೆಯ ಗುರಿಯನ್ನು ಶೇಕಡಾ 9.5 ಕ್ಕೆ ಉಳಿಸಿಕೊಂಡಿದೆ. ಹಣಕಾಸು ವರ್ಷ 2022ಕ್ಕೆ ಚಿಲ್ಲರೆ ಹಣದುಬ್ಬರವು ಶೇಕಡಾ 5.3 ರಷ್ಟಿದೆ ಎಂದು ಹೇಳಿದರು. ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರವು ಶೇಕಡಾ 2 ಮತ್ತು ಶೇಕಡಾ 4 ರಷ್ಟಿದೆ ಆರ್ ಬಿಐಗೆ ಸರ್ಕಾರ ಹೇಳಿದೆ. ಈ ಮಧ್ಯೆ, ದೇಶೀಯ ಷೇರು ಸೂಚ್ಯಂಕದಲ್ಲಿ ಇಂದು ಬಿಎಸ್ ಇ ಸೆನ್ಸೆಕ್ಸ್ 700 ಅಂಕಗಳಿಗಿಂತ ಅಧಿಕವಾಗಿ ಏರಿಕೆಯಾಗಿದೆ.ರೆಪೊ ದರ: ಬ್ಯಾಂಕುಗಳಲ್ಲಿ ಹಣದ ಕೊರತೆಯಾದರೆ ಅಥವಾ ಹಣದ ಅವಶ್ಯಕತೆಯಿದ್ದರೆ ಆರ್ ಬಿಐ ಬ್ಯಾಂಕುಗಳಿಗೆ ಕೊಡುವ ಸಾಲದ ಹಣದ ಮೇಲೆ ವಿಧಿಸುವ ನಿಶ್ಚಿತ ಬಡ್ಡಿ ದರ ರೆಪೊ ದರವಾಗಿದೆ. ಹಣದುಬ್ಬರವನ್ನು ನಿಯಂತ್ರಿಸಲು ವಿತ್ತೀಯ ಅಧಿಕಾರಿಗಳು ರೆಪೊ ದರವನ್ನು ಬಳಸುತ್ತಾರೆ.ಹಣದುಬ್ಬರದ ಸಂದರ್ಭದಲ್ಲಿ, ಕೇಂದ್ರ ಬ್ಯಾಂಕು ಆರ್ ಬಿಐ ರೆಪೊ ದರವನ್ನು ಹೆಚ್ಚಿಸುತ್ತವೆ, ಸಾಧ್ಯವಾದಷ್ಟು ಬ್ಯಾಂಕುಗಳು ಆರ್ ಬಿಐಯಿಂದ ಸಾಲ ಪಡೆಯುವುದನ್ನು ತಡೆಯುತ್ತದೆ. ಇದು ಅಂತಿಮವಾಗಿ ಆರ್ಥಿಕತೆಯಲ್ಲಿ ಹಣ ಪೂರೈಕೆಯನ್ನು ಕಡಿಮೆ ಮಾಡಿ ಹಣದುಬ್ಬರ ನಿಯಂತ್ರಿಸಲು ಸಹಾಯ ಮಾಡುತ್ತದೆ.ರಿವರ್ಸ್ ರೆಪೊ ದರ: ಇದಕ್ಕೆ ಪ್ರತಿಯಾಗಿ ಆರ್‌ಬಿಐ ಅಲ್ಪಾವಧಿಗೆ ಬ್ಯಾಂಕುಗಳಿಂದ ಹಣವನ್ನು ಸಾಲ ಪಡೆದು ಆ ಹಣದ ಮೇಲೆ ನೀಡುವ ಬಡ್ಡಿದರವನ್ನು ರಿವರ್ಸ್ ರೆಪೊ ದರ ಎಂದು ಕರೆಯುತ್ತಾರೆ.