ಇಂಟೆಲ್ ಇಂಡಿಯಾ ಮುಖ್ಯಸ್ಥೆ ನಿವೃತಿ ರೈ ರಾಜೀನಾಮೆ ಇಂಟೆಲ್ ಇಂಡಿಯಾ ಮುಖ್ಯಸ್ಥ ನಿವೃತಿ ರೈ ಅವರು 29 ವರ್ಷಗಳ ಸುದೀರ್ಘ ಸೇವೆಯ ನಂತರ ಕಂಪನಿಗೆ ರಾಜೀನಾಮೆ ನೀಡಿದ್ದಾರೆ. ರೈ ಅವರು ಇನ್ವೆಸ್ಟ್ ಇಂಡಿಯಾದ ಮತ್ತು ಆಗಿ ನೇಮಕಗೊಳ್ಳಲಿದ್ದಾರೆ. ನವದೆಹಲಿ: ಇಂಟೆಲ್ ಇಂಡಿಯಾ ಮುಖ್ಯಸ್ಥ ನಿವೃತಿ ರೈ ಅವರು 29 ವರ್ಷಗಳ ಸುದೀರ್ಘ ಸೇವೆಯ ನಂತರ ಕಂಪನಿಗೆ ರಾಜೀನಾಮೆ ನೀಡಿದ್ದಾರೆ. ರೈ ಅವರು ಇನ್ವೆಸ್ಟ್ ಇಂಡಿಯಾದ ಮತ್ತು ಆಗಿ ನೇಮಕಗೊಳ್ಳಲಿದ್ದಾರೆ.1994ರಲ್ಲಿ ವಿನ್ಯಾಸ ಎಂಜಿನಿಯರ್ ಆಗಿ ಇಂಟೆಲ್ ನಲ್ಲಿ ಕೆಲಸ ಆರಂಭಿಸಿದ ನಿವೃತಿ ರೈ ಅವರು ಇತ್ತೀಚಿಗೆ ಇಂಟೆಲ್ ಫೌಂಡ್ರಿ ಸೇವೆಗಳ ಭಾರತದ ಮುಖ್ಯಸ್ಥರಾಗಿ ಮತ್ತು ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.ಇದನ್ನು ಓದಿ: ಐಐಟಿ ಬಾಂಬೆಗೆ 315 ಕೋಟಿ ರೂ. ದೇಣಿಗೆ ನೀಡಿದ ನಂದನ್ ನಿಲೇಕಣಿ"ನಿವೃತಿ ಅವರ ನಾಯಕತ್ವದಲ್ಲಿ ಇಂಟೆಲ್ ಇಂಡಿಯಾ ಸಾಧಿಸಿದ ಅದ್ಭುತ ಪ್ರಗತಿಗಾಗಿ ನಾವು ಅವರಿಗೆ ಕೃತಜ್ಞರಾಗಿರುತ್ತೇವೆ" ಎಂದು ಕಂಪನಿಯು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ.1994 ರಲ್ಲಿ ಇಂಟೆಲ್‌ನಲ್ಲಿ ವಿನ್ಯಾಸ ಎಂಜಿನಿಯರ್ ಆಗಿ ಕೆಲಸ ಆರಂಭಿಸಿದ ನಿವೃತಿ ರೈ ಅವರು 29 ವರ್ಷಗಳ ಅವಧಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇಂದು ಕಂಪನಿ ಮುಖ್ಯಸ್ಥೆ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ನಡೆದಿದ್ದಾರೆ. ಮಹಿಳಾ ಸಬಲೀಕರಣಕ್ಕೆ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ 2022ರಲ್ಲಿ ನಿವೃತಿ ರೈ ಅವರಿಗೆ ನಾರಿ ಶಕ್ತಿ ಪುರಸ್ಕಾರವನ್ನು ನೀಡಲಾಗಿದೆ.