ಆಯ್ದ ನಗರಗಳಲ್ಲಿ ಶುಲ್ಕ ಹೆಚ್ಚಿಸಿದ ಝೊಮ್ಯಾಟೊ! ಶುಲ್ಕ ಏರಿಕೆಗೆ ಕಾರಣಗಳನ್ನು ಖಚಿತಪಡಿಸಿಕೊಳ್ಳಲು ಸಂಪರ್ಕಿಸಿದಾಗ, ಮತ್ತು ಎರಡೂ ಸಂಸ್ಥೆಗಳು ಪ್ರತಿಕ್ರಿಯೆ ನೀಡಲು ನಿರಾಕರಿಸಿದವು. ನವದೆಹಲಿ: ಆಹಾರ ಡೆಲಿವರಿ ಸಂಸ್ಥೆ ಝೊಮ್ಯಾಟೊ ಪ್ರಮುಖ ನಗರಗಳಲ್ಲಿ ಶುಲ್ಕ ಹೆಚ್ಚಳ ಮಾಡಿದೆ.ದೆಹಲಿ, ಮುಂಬೈ, ಬೆಂಗಳೂರು ನಗರಗಳಲ್ಲಿ ಶುಲ್ಕವನ್ನು ಪ್ರತಿ ಆರ್ಡರ್ ಗೆ 5-6 ರೂಪಾಯಿಗಳನ್ನು ಝೊಮ್ಯಾಟೋ ಹೆಚ್ಚಳ ಮಾಡಿದೆ.ಝೊಮ್ಯಾಟೋ ಗೆ ಪ್ರತಿಸ್ಪರ್ಧಿಯಾಗಿರುವ ಸ್ವಿಗ್ಗಿ ಸಹ ಹಲವು ನಗರಗಳಲ್ಲಿ ಶುಲ್ಕವನ್ನು ಹೆಚ್ಚಳ ಮಾಡಿತ್ತು. ಆದರೆ ದೆಹಲಿ, ಮುಂಬೈ, ಬೆಂಗಳೂರು ನಗರಗಳಲ್ಲಿ ಪ್ರತಿ ಆರ್ಡರ್ ಗೆ 5 ರೂಪಾಯಿಗಳ ಶುಲ್ಕಕ್ಕೆ ಮತ್ತೆ ಬದಲಾವಣೆ ಮಾಡಿದೆ.ಶುಲ್ಕ ಏರಿಕೆಗೆ ಕಾರಣಗಳನ್ನು ಖಚಿತಪಡಿಸಿಕೊಳ್ಳಲು ಸಂಪರ್ಕಿಸಿದಾಗ, ಮತ್ತು ಎರಡೂ ಸಂಸ್ಥೆಗಳು ಪ್ರತಿಕ್ರಿಯೆ ನೀಡಲು ನಿರಾಕರಿಸಿದವು. ಎರಡು ಕಂಪನಿಗಳು ಕಳೆದ ವರ್ಷ ಪ್ಲಾಟ್‌ಫಾರ್ಮ್ ಶುಲ್ಕವನ್ನು ಪರಿಚಯಿಸಿದ್ದವು, ಆರಂಭದಲ್ಲಿ ಪ್ರತಿ ಆರ್ಡರ್‌ಗೆ 2 ರೂ ಇದ್ದ ಶುಲ್ಕವನ್ನು ಕ್ರಮೇಣ ಹೆಚ್ಚಿಸಲಾಗಿದೆ. ಪ್ಲಾಟ್‌ಫಾರ್ಮ್ ಶುಲ್ಕವನ್ನು ಆಹಾರ-ವಿತರಣಾ ಪ್ಲಾಟ್‌ಫಾರ್ಮ್‌ಗಳು ತಮ್ಮ ಲಾಭದಾಯಕತೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವ ವಿಧಾನಗಳಲ್ಲಿ ಒಂದಾಗಿ ಪರಿಗಣಿಸಲಾಗುತ್ತದೆ.