ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವು ಡಿಸೆಂಬರ್ 31 ರವರೆಗೆ ವಿಸ್ತರಣೆ 2020-21ನೇ ಸಾಲಿನ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಕೇಂದ್ರ ಸರ್ಕಾರ ಡಿಸೆಂಬರ್ 31 ರವರೆಗೆ ವಿಸ್ತರಿಸಿದೆ. ನವದೆಹಲಿ: 2020-21ನೇ ಸಾಲಿನ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಕೇಂದ್ರ ಸರ್ಕಾರ ಡಿಸೆಂಬರ್ 31 ರವರೆಗೆ ವಿಸ್ತರಿಸಿದೆ.ಈ ಹಿಂದೆ ಐಟಿ ರಿಟರ್ನ್ಸ್ ಸಲ್ಲಿಕೆಗೆ ಸೆಪ್ಟೆಂಬರ್ 30 ಕೊನೆಯ ದಿನವಾಗಿತ್ತು. ಈಗ ಅದನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ."ತೆರಿಗೆದಾರರ ಸಂಕಷ್ಟಗಳನ್ನು ಪರಿಗಣಿಸಿ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ() 2021-22 ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ ಮತ್ತು ವಿವಿಧ ಲೆಕ್ಕಪರಿಶೋಧನೆಯ ವರದಿಗಳನ್ನು ಸಲ್ಲಿಸುವ ಅಂತಿಮ ದಿನಾಂಕಗಳನ್ನು ಮತ್ತಷ್ಟು ವಿಸ್ತರಿಸಲು ನಿರ್ಧರಿಸಿದೆ "ಎಂದು ಹಣಕಾಸು ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.ಇದನ್ನು ಓದಿ: ಆದಾಯ ತೆರಿಗೆ ಪೋರ್ಟಲ್ ಸಮಸ್ಯೆ: ಇನ್ಫೋಸಿಸ್ ಸಿಇಒ- ನಿರ್ಮಲಾ ಸೀತಾರಾಮನ್ ಭೇಟಿಆದಾಯ ತೆರಿಗೆ ಇಲಾಖೆ 1961 ರ ಕಾಯ್ದೆ ಅಡಿಯಲ್ಲಿ( 2021-22) ಆದಾಯ ತೆರಿಗೆ ರಿಟರ್ನ್ಸ್ () ಮತ್ತು ಆಡಿಟ್ ವರದಿಗಳನ್ನು ಸಲ್ಲಿಸುವ ದಿನಾಂಕ ವಿಸ್ತರಿಸಲಾಗಿದೆ. ತೆರಿಗೆದಾರರು ಸೂಚಿಸಿದ ಸಮಸ್ಯೆಗಳನ್ನು ಪರಿಗಣಿಸಿ, ಯು 21-22 ಗೆ ಗಳು ಮತ್ತು ಆಡಿಟ್ ವರದಿಗಳನ್ನು ಸಲ್ಲಿಸಲು ಅಂತಿಮ ದಿನಾಂಕಗಳನ್ನು ವಿಸ್ತರಿಸುತ್ತದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.