ಇಂದು ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಕೊರೋನಾ ವೈರಸ್ ಲಾಕ್ ಡೌನ್ ಕಾರಣದಿಂದ ಇಂದು ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದ್ದು ಈ ನಿಟ್ಟಿನಲ್ಲಿ ಸಮಾಜದ ವಿವಿಧ ವರ್ಗಗಳಿಗೆ ನಿನ್ನೆ ಪ್ರಧಾನಿ ಮೋದಿ 20 ಲಕ್ಷ ಕೋಟಿ ರೂಪಾಯಿಗಳ ಪರಿಹಾರ ಪ್ಯಾಕೇಜ್ ಘೋಷಿಸಿದ್ದರು. ಅದರ ವಿವರಗಳನ್ನು ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೊಡಲಿದ್ದಾರೆ ಎಂದು ಹೇಳಿದ್ದರು.ನಿನ್ನೆ ಪ್ರಧಾನಿ ಮೋದಿಯವರು ಪ್ರಕಟಿಸಿದ್ದ ಮೊತ್ತ 265 ಬಿಲಿಯನ್ ಡಾಲರ್ ಆಗಿದ್ದು ಇಡೀ ಏಷ್ಯಾ ಖಂಡದಲ್ಲಿ ಜಪಾನ್ ನಂತರ ಇಷ್ಟೊಂದು ಪರಿಹಾರ ಮೊತ್ತವನ್ನು ಪ್ರಕಟಿಸಿದ ದೇಶ ಭಾರತವಾಗಿದೆ.ಈ ನಿಟ್ಟಿನಲ್ಲಿ ಇಂದು ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿ ಕರೆದಿದ್ದು ಅದರಲ್ಲಿ ಆರ್ಥಿಕ ಪ್ಯಾಕೇಜ್, ಆತ್ಮನಿರ್ಭಾರ್ ಭಾರತ್ ಅಭಿಯಾನ ಬಗ್ಗೆ ವಿವರ ನೀಡಲಿದ್ದಾರೆ. . @ , 13th 2020, 4 .## # # ../FmKcItA23C —