ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನಲ್ಲಿ 677 ಹೊಸ ಪೆಟ್ರೋಲ್ ಪಂಪ್‌ ಸ್ಥಾಪನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿ ವರ್ಷ ಸಾವಿರಾರು ಹೊಸ ವಾಹನಗಳು ರಸ್ತೆಗಿಳಿಯುತ್ತಿದ್ದು, ಇಂಧನ ಬೇಡಿಕೆಯ ಹೆಚ್ಚುತ್ತಿದೆ. ಹೀಗಾಗಿ ಸರ್ಕಾರಿ ಸ್ವಾಮ್ಯದ ಪ್ರಮುಖ ತೈಲ ಕಂಪನಿಗಳಾದ ಬಿಪಿಸಿಎಲ್ ಮತ್ತು ಎಚ್ ಪಿಸಿಎಲ್, ಜಮ್ಮು ಮತ್ತು... ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿ ವರ್ಷ ಸಾವಿರಾರು ಹೊಸ ವಾಹನಗಳು ರಸ್ತೆಗಿಳಿಯುತ್ತಿದ್ದು, ಇಂಧನ ಬೇಡಿಕೆಯ ಹೆಚ್ಚುತ್ತಿದೆ. ಹೀಗಾಗಿ ಸರ್ಕಾರಿ ಸ್ವಾಮ್ಯದ ಪ್ರಮುಖ ತೈಲ ಕಂಪನಿಗಳಾದ ಬಿಪಿಸಿಎಲ್ ಮತ್ತು ಎಚ್ ಪಿಸಿಎಲ್, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ 677 ಹೊಸ ಪೆಟ್ರೋಲ್ ಪಂಪ್‌ಗಳನ್ನು ಸ್ಥಾಪಿಸಲಿವೆ.ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ 643 ಹೊಸ ಪೆಟ್ರೋಲ್ ಪಂಪ್‌ಗಳನ್ನು ಸ್ಥಾಪಿಸಲಾಗುವುದು. ಈ ಪೈಕಿ 342 ಜಮ್ಮು ಪ್ರದೇಶದಲ್ಲಿ ಮತ್ತು 301 ಕಾಶ್ಮೀರದಲ್ಲಿ ಸ್ಥಾಪಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಇದನ್ನು ಓದಿ: ಜಮ್ಮು-ಕಾಶ್ಮೀರ: ಕುಲ್ಗಾಂ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನ ಹತ್ಯೆ, ಶೋಧ ಕಾರ್ಯಾಚರಣೆ ಮುಂದುವರಿಕೆ"ಲಡಾಖ್‌ನಲ್ಲಿ, ಒಟ್ಟು 34 ಹೊಸ ಪೆಟ್ರೋಲ್ ಪಂಪ್‌ಗಳನ್ನು ಸ್ಥಾಪಿಸಲಾಗುವುದು" ಎಂದು ಅವರು ಹೇಳಿದ್ದಾರೆ.ಪ್ರಸ್ತುತ, ಜಮ್ಮು ಮತ್ತು ಕಾಶ್ಮೀರವು ಒಟ್ಟು 646 ಇಂಧನ ಕೇಂದ್ರಗಳನ್ನು ಹೊಂದಿದೆ ಮತ್ತು ಲಡಾಖ್ 32 ಪೆಟ್ರೋಲ್ ಪಂಪ್‌ಗಳನ್ನು ಹೊಂದಿದೆ.