ಅಮಿತ್ ಪಂಘಾಲ್ ವಿಶ್ವದ ನಂ.1 ಬಾಕ್ಸರ್ ಹಾಲಿ ಏಷ್ಯನ್ ಗೇಮ್ಸ್ ಚಾಂಪಿಯನ್ ಮತ್ತು ವಿಶ್ವ ಚಾಂಪಿಯನ್ ಷಿಪ್ ಬೆಳ್ಳಿ ಪದಕ ವಿಜೇತ ಅಮಿತ್ ಪಂಘಾಲ್ ಅಮೆಚೂರ್ ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (ಎಐಬಿಎ) ನೂತನವಾಗಿ ಬಿಡುಗಡೆ ಮಾಡಿದ ವಿಶ್ವ ರಾಂಕಿಂಗ್ ನ 52 ಕೆ. ಜಿ ವಿಭಾಗದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ನವದೆಹಲಿ: ಹಾಲಿ ಏಷ್ಯನ್ ಗೇಮ್ಸ್ ಚಾಂಪಿಯನ್ ಮತ್ತು ವಿಶ್ವ ಚಾಂಪಿಯನ್ ಷಿಪ್ ಬೆಳ್ಳಿ ಪದಕ ವಿಜೇತ ಅಮಿತ್ ಪಂಘಾಲ್ ಅಮೆಚೂರ್ ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (ಎಐಬಿಎ) ನೂತನವಾಗಿ ಬಿಡುಗಡೆ ಮಾಡಿದ ವಿಶ್ವ ನ 52 ಕೆ. ಜಿ ವಿಭಾಗದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.ಈ ಮಹತ್ವದ ಬೆಳವಣಿಗೆಯೊಂದಿಗೆ ಭಾರತೀಯ ಬಾಕ್ಸಿಂಗ್ ವಲಯ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಸುಮಾರು 18 ತಿಂಗಳ ಸುದೀರ್ಘಾವಧಿಯ ಬಳಿಕ ಪುರುಷರ ಪಟ್ಟಿ ಬಿಡುಗಡೆಯಾಗಿದೆ. 2019ರ ಜನವರಿಯಲ್ಲಿ ಐಬಾ ಕೊನೆಯದಾಗಿ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ವೇಳೆ ಕೇವಲ ಮಹಿಳಾ ಬಾಕ್ಸರ್ ಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆಗ 2018ರ ನವೆಂಬರ್ ನಲ್ಲಿ ದಿಲ್ಲಿಯಲ್ಲಿ ನಡೆದಿದ್ದ ಮಹಿಳಾ ವಿಶ್ವ ಚಾಂಪಿಯನ್ ಷಿಪ್ ನಲ್ಲಿ ತಮ್ಮ ಐತಿಹಾಸಿಕ ಆರನೇ ಚಿನ್ನದ ಪದಕ ಜಯಿಸಿದ್ದ ಎಂ.ಸಿ. ಮೇರಿ ಕೋಮ್ 48 ಕೆ.ಜಿ. ವಿಭಾಗದಲ್ಲಿ ಮೊದಲ ಸ್ಥಾನಕ್ಕೇರಿದ್ದರು. ಈ ಸಂದರ್ಭದಲ್ಲಿ ಐಬಾ ಪುರುಷರ ಪಟ್ಟಿಯನ್ನು ಬಿಡುಗಡೆ ಮಾಡಿರಲಿಲ್ಲ.