ಕಾಮನ್ವೆಲ್ತ್ ಗೇಮ್ಸ್: ಭಾರತಕ್ಕೆ ಮತ್ತೊಂದು ಪದಕ; ಜೂಡೋದಲ್ಲಿ ಬೆಳ್ಳಿ ಗೆದ್ದ ತುಲಿಕಾ ಮಾನ್‌ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು, ಆರನೇ ದಿನವಾದ ಬುಧವಾರ ಮಹಿಳೆಯರ 78 ಕೆಜಿ ವಿಭಾಗದ ಜೂಡೋ ಸ್ಪರ್ಧೆಯಲ್ಲಿ ಭಾರತದ ತುಲಿಕಾ ಮಾನ್ ಅವರು ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು, ಆರನೇ ದಿನವಾದ ಬುಧವಾರ ಮಹಿಳೆಯರ 78 ಕೆಜಿ ವಿಭಾಗದ ಜೂಡೋ ಸ್ಪರ್ಧೆಯಲ್ಲಿ ಭಾರತದ ತುಲಿಕಾ ಮಾನ್ ಅವರು ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.ತುಲಿಕಾ ಮಾನ್ ಅವರು ಇಂದು ನಡೆದ ಮಹಿಳೆಯರ +78 ಕೆಜಿ ವಿಭಾಗದ ಫೈನಲ್‌ನಲ್ಲಿ ಸ್ಕಾಟ್ಲೆಂಡ್‌ನ ಸಾರಾ ಅಡ್ಲಿಂಗ್ಟನ್ ವಿರುದ್ಧ ಸೋಲು ಅನುಭವಿಸುವ ಮೂಲಕ ಬೆಳ್ಳಿಗೆ ತೃಪ್ತಿಪಟ್ಟಿದ್ದಾರೆ. ಈ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಜೂಡೋದಲ್ಲಿ ಭಾರತಕ್ಕೆ ಇದು ಮೂರನೇ ಪದಕವಾಗಿದೆ.ಇದನ್ನು ಓದಿ: ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮತ್ತೊಂದು ಪದಕ; ಸ್ಕ್ವಾಷ್ನಲ್ಲಿ ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಸೌರವ್ತುಲಿಕಾ ಮಾನ್ ಅವರ ಈ ಸಾಧನೆಯೊಂದಿಗೆ ಭಾರತ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಐದು ಚಿನ್ನ, ಆರು ಬೆಳ್ಳಿ ಹಾಗೂ ಐದು ಕಂಚು ಸಹಿತ 16 ಪದಕಗಳನ್ನು ಪಡೆದುಕೊಂಡಿದೆ.