ಪ್ಯಾರಾಲಿಂಪಿಕ್ಸ್‌ ಟಿಟಿ: ಫೈನಲ್‌ಗೆ ಲಗ್ಗೆಯಿಟ್ಟ ಭವಿನಾ ಪಟೇಲ್‌ ಪ್ಯಾರಾಲಿಂಪಿಕ್ಸ್‌ನ ಟೇಬಲ್‌ ಟೆನಿಸ್‌ನಲ್ಲಿ ಭಾರತದ ಭವಿನಾ ಪಟೇಲ್‌ ಫೈನಲ್‌ಗೆ ಲಗ್ಗೆಯಿಟ್ಟಿದ್ದು, ಪದಕ ಗೆಲ್ಲುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದಾರೆ. ಟೊಕಿಯೋ: ಪ್ಯಾರಾಲಿಂಪಿಕ್ಸ್‌ನ ಟೇಬಲ್‌ ಟೆನಿಸ್‌ನಲ್ಲಿ ಭಾರತದ ಭವಿನಾ ಪಟೇಲ್‌ ಫೈನಲ್‌ಗೆ ಲಗ್ಗೆಯಿಟ್ಟಿದ್ದು, ಪದಕ ಗೆಲ್ಲುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದಾರೆ. ಮಹಿಳಾ ಟೇಬಲ್ ಟೆನ್ನಿಸ್ ಸಿಂಗಲ್ಸ್ನಲ್ಲಿ ಚೀನಾದ ಮಿಯಾವೋ ಝಾಂಗ್ ಅವರನ್ನು ಮಣಿಸಿ ಭಾರತೀಯ ಪ್ಯಾರಾ ಟೇಬಲ್ ಟೆನ್ನಿಸ್ ಆಟಗಾರ್ತಿ ಭಾವಿನಾ ಪಟೇಲ್ ಫೈನಲ್‌ಗೆ ಪ್ರವೇಶ ಪಡೆದಿದ್ದಾರೆ. ಆ ಮೂಲಕ ಚಿನ್ನದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ.ಸೆಮಿಫೈನಲ್ನಲ್ಲಿ ಚೀನಾದ ಮಿಯಾವೋ ಝಾಂಗ್ ಅವರನ್ನು 3-2 ಸೆಟ್ಗಳಿಂದ ಮಣಿಸಿದ ಅವರು ಫೈನಲ್ಸ್ ಪ್ರವೇಶಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತದ ಪ್ಯಾರಾ ಟೆನ್ನಿಸ್‌ ಆಟಗಾರ್ತಿ ಹೊಸದೊಂದು ದಾಖಲೆ ಬರೆಯಲು ಸಜ್ಜಾಗಿದ್ದಾರೆ.