ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪಿವಿ ಸಿಂಧು ಭಾರತದ ಧ್ವಜಧಾರಿ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ಎರಡು ಬಾರಿ ಒಲಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಭಾರತದ ಧ್ವಜ ಹಿಡಿದು ತಂಡವನ್ನು ಮುನ್ನಡೆಸಲಿದ್ದಾರೆ. ಬರ್ಮಿಂಗ್ಹ್ಯಾಮ್‌: ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ಎರಡು ಬಾರಿ ಒಲಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಭಾರತದ ಧ್ವಜ ಹಿಡಿದು ತಂಡವನ್ನು ಮುನ್ನಡೆಸಲಿದ್ದಾರೆ. ಬರ್ಮಿಂಗ್ಹ್ಯಾಮ್‌ನ ಹೊಸದಾಗಿ ನವೀಕರಿಸಿದ ಅಲೆಕ್ಸಾಂಡರ್ ಕ್ರೀಡಾಂಗಣದಲ್ಲಿ ಗುರುವಾರ ಉದ್ಘಾಟನಾ ಸಮಾರಂಭ ನಡೆಯಲಿದೆ. 11 ದಿನಗಳ ಬಹು-ಕ್ರೀಡಾ ಕಾರ್ಯಕ್ರಮಕ್ಕೆ ನಾಳೆ ಅಧಿಕೃತ ಚಾಲನೆ ದೊರೆಯಲಿದೆ.ಇದನ್ನು ಓದಿ: ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಫೈನಲ್: ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಪಿ ವಿ ಸಿಂಧು"ಉದ್ಘಾಟನಾ ಸಮಾರಂಭದ ಭಾರತ ತಂಡದ ಧ್ವಜಧಾರಿಯಾಗಿ ಪಿವಿ ಸಿಂಧು ಅವರನ್ನು ಹೆಸರಿಸಲಾಗಿದೆ" ಎಂದು ಭಾರತೀಯ ಒಲಿಂಪಿಕ್ ಸಂಸ್ಥೆಯ(ಐಒಎ) ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.ನಾಳೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಒಟ್ಟು 164 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಭಾರತದಿಂದ ಒಟ್ಟು 215 ಅಥ್ಲೀಟ್‌ಗಳು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಸ್ಪರ್ಧಿಸಲಿದ್ದಾರೆ.