ಕುರ್ಟೇನ್ ಗೇಮ್ಸ್: ಕಂಚಿನ ಪದಕ ಗೆದ್ದ ಭಾರತೀಯ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಫಿನ್‌ಲ್ಯಾಂಡ್‌ನಲ್ಲಿ ನಡೆದ ಕುರ್ಟೇನ್ ಕ್ರೀಡಾಕೂಟದಲ್ಲಿ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಕಂಚಿನ ಪದಕ ಗೆದ್ದಿದ್ದಾರೆ. ಹೆಲ್ಸಿಂಕಿ: ಫಿನ್‌ಲ್ಯಾಂಡ್‌ನಲ್ಲಿ ನಡೆದ ಕುರ್ಟೇನ್ ಕ್ರೀಡಾಕೂಟದಲ್ಲಿ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಕಂಚಿನ ಪದಕ ಗೆದ್ದಿದ್ದಾರೆ.ನೀರಜ್ ಚೋಪ್ರಾ ಅವರು 86.79 ಮೀಟರ್ ದೂರಕ್ಕೆ ಎಸೆದಿದ್ದು, ಕಂಚಿನ ಪದಕ ಗೆದ್ದಿದ್ದಾರೆ ಎಂದು ಅಧಿಕೃತ ಒಲಿಂಪಿಕ್ಸ್ ವೆಬ್‌ಸೈಟ್ ವರದಿ ಮಾಡಿದೆ.ಜರ್ಮನಿಯ ಜೋಹಾನ್ಸ್ ವೆಟ್ಟರ್ 93.59 ಮೀಟರ್ ಬೃಹತ್ ಎಸೆತದಿಂದ ಚಿನ್ನ ಗೆದ್ದರೆ, ಕೆಶೋರ್ನ್ ವಾಲ್ಕಾಟ್ ಅವರು 89.12 ಮೀಟರ್ ದೂರಕ್ಕೆ ಎಸೆದು ಬೆಳ್ಳಿ ಪದಕ ಗೆದ್ದಿದ್ದಾರೆ.