ಟೋಕಿಯೊ ಪ್ಯಾರಾಲಿಂಪಿಕ್ಸ್: ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಪ್ರಮೋದ್ ಭಗತ್ ಗೆ ಚಿನ್ನ, ಮನೋಜ್ ಸರ್ಕಾರ್ ಗೆ ಕಂಚು ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರಿದಿದೆ. ಪ್ರಮೋದ್ ಭಗತ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 3 ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಟೋಕಿಯೊ: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರಿದಿದೆ. ಪ್ರಮೋದ್ ಭಗತ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 3 ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ವಿಶ್ವದ ನಂಬರ್ 1 ಪ್ರಮೋದ್ ಭಗತ್ 21-14, 21-17 ಸೆಟ್ ಗಳಿಂದ ಗ್ರೇಟ್ ಬ್ರಿಟನ್ ನ ಡೇನಿಯಲ್ ಬೆತೆಲ್ಲ್ ಅವರನ್ನು ಸೋಲಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟರು. ಈ ಮೂಲಕ ಇಂದಿನ ಪ್ಯಾರಾಲಿಂಪಿಕ್ಸ್ ಪಂದ್ಯದಲ್ಲಿ ಭಾರತ ಎರಡನೇ ಪದಕ ಗೆದ್ದುಕೊಂಡಿತು. ಇನ್ನು ಮನೋಜ್ ಸರ್ಕಾರ್ ಕೂಡ ಅದೇ ವಿಭಾಗದಲ್ಲಿ ಜಪಾನ್‌ನ ಡೈಸುಕೆ ಫುಜಿಹರಾ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಮನೋಜ್ ಅವರು ಪ್ಯಾರಾಲಿಂಪಿಕ್ ನಲ್ಲಿ ಭಾರತಕ್ಕೆ 17ನೇ ಪದಕ ತಂದುಕೊಟ್ಟಿದ್ದಾರೆ. ಇಬ್ಬರು ಆಟಗಾರರಿಗೂ ದೇಶದ ಮೂಲೆ ಮೂಲೆಗಳಿಂದ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ. , ' . # #' ##Tokyo2020 ../