2024: ಹಾಕಿ ಗ್ರೂಪ್ ಸ್ಟೇಜ್ ನಲ್ಲಿ ಭಾರತ ಶುಭಾರಂಭ; ಪ್ರಬಲ ನ್ಯೂಜಿಲೆಂಡ್ ವಿರುದ್ಧ 3-2 ವಿರೋಚಿತ ಜಯ! ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ ಶುಭಾರಂಭ ಮಾಡಿದ್ದು, ಪ್ರಬಲ ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ವಿರೋಚಿತ ಗೆಲುವು ಸಾಧಿಸಿದೆ. ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ ಶುಭಾರಂಭ ಮಾಡಿದ್ದು, ಪ್ರಬಲ ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ವಿರೋಚಿತ ಗೆಲುವು ಸಾಧಿಸಿದೆ.ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶನಿವಾರ ನಡೆದ ಬಿ ಗುಂಪಿನ ತ ನ್ನ ಮೊದಲ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡವು ಪ್ರಬಲ ನ್ಯೂಜಿಲ್ಯಾಂಡ್ ತಂಡವನ್ನು 3-2 ಅಂತರದಿಂದ ಮಣಿಸಿತು.ಪಂದ್ಯದ ಆರಂಭದಲ್ಲಿ ನ್ಯೂಜಿಲೆಂಡ್ 8ನೇ ನಿಮಿಷದಲ್ಲಿ 1-0 ಮುನ್ನಡೆ ಪಡೆಯಿತು. 24ನೇ ಹಾಗೂ 34ನೇ ನಿಮಿಷದಲ್ಲಿ ಗೋಲು ಗಳಿಸಿದ ಭಾರತ 2-1 ಮುನ್ನಡೆ ಸಾಧಿಸಿತು. 53ನೇ ನಿಮಿಷದಲ್ಲಿ ಗೋಲು ಗಳಿಸಿದ ಕಿವೀಸ್ ಸ್ಕೋರನ್ನು 2-2ರಿಂದ ಸಮಬಲಗೊಳಿಸಿತು.59ನೇ ನಿಮಿಷದಲ್ಲಿ ಗೆಲುವಿನ ಗೋಲು ಗಳಿಸಿದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಭಾರತಕ್ಕೆ ರೋಚಕ ಗೆಲುವು ತಂದುಕೊಟ್ಟರು.ಭಾರತವು ಜುಲೈ 29ರಂದು ಬಿ ಗುಂಪಿನ ತನ್ನ 2ನೇ ಪಂದ್ಯದಲ್ಲಿ ಅರ್ಜೆಂಟೀನ ತಂಡವನ್ನು ಎದುರಿಸಲಿದೆ.🇮🇳 3️⃣ - 2️⃣ 🇳🇿 ....!!! 🔥❤️#Paris2024 # ://./XSh0hYvsMS ../