ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಚಿನ್ನ ಗೆದ್ದ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾ ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ತಮ್ಮ ಮುಡಿಗೇರಿಸಿಕೊಂಡರು. ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ತಮ್ಮ ಮುಡಿಗೇರಿಸಿಕೊಂಡರು.ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಎದುರಾಳಿ ಎಬಿಕೆವೆನಿಮೊ ವೆಲ್ಸನ್ ಅವರನ್ನು 10-0 ಅಂತರದಲ್ಲಿ ಸೋಲಿಸಿ, ಚಿನ್ನದ ಪದಕಕ್ಕೆ ಮುತ್ತಿಟ್ಟರು. ಶ್ರೇಷ್ಠ ಹೋರಾಟದ ಮೂಲಕ ಚಿನ್ನ ಗೆದ್ದ ರವಿಕುಮಾರ್ ದಹಿಯಾ, ಕುಸ್ತಿಯಲ್ಲಿ ಭಾರತಕ್ಕೆ ನಾಲ್ಕನೇ ಚಿನ್ನವನ್ನು ತಂದುಕೊಟ್ಟರು.ಇದಕ್ಕೂ ಮುನ್ನ ಪಾಕಿಸ್ತಾನದ ಗ್ರಾಪ್ಲರ್ ಅಲಿ ಅಸದ್ ಅವರನ್ನು ಸೋಲಿಸಿ ಫೈನಲ್ ಗೆ ರವಿಕುಮಾರ್ ದಹಿಯಾ ಲಗ್ಗೆ ಇಟ್ಟಿದ್ದರು. ಆ ಸ್ಪರ್ಧೆಯಲ್ಲಿ 14-4 ಅಂತರದಲ್ಲಿ ದಹಿಯಾ ಗೆಲುವು ಸಾಧಿಸಿದ್ದರು. 57 10-0 #CommonwealthGames2022 ../RXSLzWGN4R