ವಿಶ್ವ ಬಿಲಿಯರ್ಡ್ಸ್: ಪಂಕಜ್ ಅಡ್ವಾಣಿಗೆ ವಿಶ್ವ ಚಾಂಪಿಯನ್ ಪಟ್ಟ ಭಾರತದ ಹೆಮ್ಮೆಯ ಬಿಲಿಯರ್ಡ್ಸ್ ತಾರೆ ಪಂಕಜ್ ಅಡ್ವಾಣಿ ಅವರು ಮಂಗಳವಾರ ಐಬಿಎಸ್‌ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ದೋಹಾ: ಭಾರತದ ಹೆಮ್ಮೆಯ ಬಿಲಿಯರ್ಡ್ಸ್ ತಾರೆ ಪಂಕಜ್ ಅಡ್ವಾಣಿ ಅವರು ಮಂಗಳವಾರ ಐಬಿಎಸ್‌ಎಫ್ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.ಇಂದು ದೋಹಾದಲ್ಲಿ ನಡೆದ ಫೈನಲ್‌ನಲ್ಲಿ ಬೆಂಗಳೂರಿನ ಪಂಕಜ್ ಅಡ್ವಾಣಿ ಅವರು, ಭಾರತದವರೇ ಆದ ಸೌರವ್ ಕೊಠಾರಿ ಅವರನ್ನು ಸೋಲಿಸುವ ಮೂಲಕ 26ನೇ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.ಇದನ್ನೂ ಓದಿ: ಏಷ್ಯನ್ ಪ್ಯಾರಾ ಗೇಮ್ಸ್ 2023: 100 ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ, ಪ್ರಧಾನಿ ಮೋದಿ ಮೆಚ್ಚುಗೆ2005 ರಲ್ಲಿ ಮೊದಲ ಬಾರಿ ವಿಶ್ವ ಪ್ರಶಸ್ತಿ ಗೆದ್ದ ಪಂಕಜ್ ಅಡ್ವಾಣಿ ಅವರು ಈಗ ಒಂಬತ್ತನೇ ಬಾರಿಗೆ 'ಲಾಂಗ್ ಫಾರ್ಮ್ಯಾಟ್ ನಲ್ಲಿ ಪ್ರಶಸ್ತಿ ಗೆದ್ದಿದ್ದಾರೆ. ಅಲ್ಲದೆ ಎಂಟು ಬಾರಿ 'ಪಾಯಿಂಟ್ ಫಾರ್ಮ್ಯಾಟ್' ಚಾಂಪಿಯನ್‌ಶಿಪ್‌ನಲ್ಲಿ ಜಯಗಳಿಸಿದ್ದಾರೆ ಮತ್ತು ಒಮ್ಮೆ ವಿಶ್ವ ಟೀಮ್ ಬಿಲಿಯರ್ಡ್ಸ್ ಚಾಂಪಿಯನ್‌ಶಿಪ್ ಗೆದ್ದಿದ್ದಾರೆ.