ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ; ಕಂಚಿಗೆ ಮುತ್ತಿಟ್ಟ ಪಿವಿ ಸಿಂಧು ಟೋಕಿಯೊ ಒಲಂಪಿಕ್ಸ್ ನ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ ವಿಭಾಗದಲ್ಲಿ ಭಾರತದ ಖ್ಯಾತ ಆಟಗಾರ್ತಿ ಪಿವಿ ಸಿಂಧು ಕಂಚಿಗೆ ಮುತ್ತಿಟ್ಟಿದ್ದಾರೆ. ಟೋಕಿಯೊ: ಟೋಕಿಯೊ ಒಲಂಪಿಕ್ಸ್ ನ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ ವಿಭಾಗದಲ್ಲಿ ಭಾರತದ ಖ್ಯಾತ ಆಟಗಾರ್ತಿ ಪಿವಿ ಸಿಂಧು ಕಂಚಿಗೆ ಮುತ್ತಿಟ್ಟಿದ್ದಾರೆ. ಈ ಮೂಲಕ ಪಿವಿ ಸಿಂಧು ಒಲಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿದ್ದಾರೆ. 2016ರಲ್ಲಿ ರಿಯೋದಲ್ಲಿ ನಡೆದಿದ್ದ ಒಲಂಪಿಕ್ಸ್ ನಲ್ಲಿ ಸಿಂಧು ಬೆಳ್ಳಿ ಪದಕ ಗೆದ್ದಿದ್ದರು.ಸೆಮಿಫೈನಲ್ ಪಂದ್ಯದಲ್ಲಿ ಎರಡನೇ ಶ್ರೇಯಾಂಕಿತೆ ತೈಜು ಯಿಂಗ್ ವಿರುದ್ಧ ಪಿವಿ ಸಿಂಧು ಸೋಲು ಕಂಡಿದ್ದರು. ಇಂದು ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಸಿಂಧು ಚೀನಾದ ಹೀ ಬಿಂಗ್ಜಿಯಾವೊ ವಿರುದ್ಧ 21-13, 21-15 ನೇರ ಸೆಟ್ ಗಳಿಂದ ಗೆಲುವು ಸಾಧಿಸಿದರು. ಟೋಕಿಯೋ ಒಲಿಂಪಿಕ್ಸ್ನ # ನಲ್ಲಿ ಕಂಚಿನ ಪದಕ ಗೆದ್ದ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಒಲಂಪಿಕ್ಸ್ ನಲ್ಲಿ 2 ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ದಾಖಲೆಯನ್ನೂ @Pvsindhu1 ನಿರ್ಮಿಸಿದ್ದಾರೆ. : ://./4Itdfe0fSk# @XpressBengaluruಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಎರಡನೇ ಪದಕ ಬಂದಿದೆ. ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದರು.