ಟೊಕಿಯೊ ಒಲಂಪಿಕ್ಸ್‌ ಕುಸ್ತಿ: ಸೆಮಿಫೈನಲ್‌ ಪ್ರವೇಶಿಸಿದ ಬಜರಂಗ್ ಪೂನಿಯಾ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಟೊಕಿಯೊ ಒಲಂಪಿಕ್ಸ್ನಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದು, ಈ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ. ಟೊಕಿಯೊ: ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಟೊಕಿಯೊ ಒಲಂಪಿಕ್ಸ್ನಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದು, ಈ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ.ಪುರುಷರ 65 ಕೆ.ಜಿ. ಫ್ರೀಸ್ಟೈಲ್ ವಿಭಾಗದ ಕ್ವಾರ್ಟರ್‌ಫೈನಲ್‌ನಲ್ಲಿ ಬಜರಂಗ್ ಪೂನಿಯಾ ಇರಾನ್‌ನ ಮೊರ್ತೆಜಾ ಗಿಯಾಸಿ ವಿರುದ್ದ ಗೆಲುವು ದಾಖಲಿಸಿದ್ದಾರೆ.ಇಂದು ನಡೆದ ಪಂದ್ಯದಲ್ಲಿ ಮೊದಲ ಸುತ್ತಿನಿಂದಲೂ ಎದುರಾಳಿಯ ಮೇಲೆ ಆಕ್ರಮಣಕಾರಿ ಆಟವಾಡಿದ ಬಜರಂಗ್ ಪುನಿಯಾ, ಮೊದಲ ರೌಂಡ್ನಲ್ಲಿ 1-0 ಮುನ್ನಡೆ ಸಾಧಿಸಿದರು. ನಂತರ ಎರಡನೇ ರೌಂಡ್ನಲ್ಲಿ 2-1 ರಿಂದ ಮುನ್ನಡೆ ಸಾಧಿಸಿದ ಬಜರಂಗ್, ಅಂತಿಮವಾಗಿ 2-1 ಅಂತರದಿಂದ ಗೆಲವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದರು.‌ ಸೆಮಿಫೈನಲ್ನಲ್ಲಿ ಅಜೆರ್ಬೈಜಾನ್ನ ಹಾಜಿ ಅಲಿಯೇವ್ ವಿರುದ್ಧ ಸೆಣಸಾಡಲಿದ್ದಾರೆ.