ಯುಎಸ್ ಓಪನ್: ಎರಡನೇ ಸುತ್ತಿನಲ್ಲಿ ಸುಮಿತ್ ನಗಾಲ್ ಗೆ ಸೋಲು ಭಾರತದ ಯುವ ಆಟಗಾರ ಸುಮಿತ್ ನಗಾಲ್ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ಅಮೆರಿಕ ಓಪನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನಲ್ಲಿ ಸೋತು ಟೂರ್ನಿಯಿಂದ ನಿರ್ಮಿಸಿದ್ದಾರೆ. ನ್ಯೂಯಾರ್ಕ್: ಭಾರತದ ಯುವ ಆಟಗಾರ ಸುಮಿತ್ ನಗಾಲ್ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ಅಮೆರಿಕ ಓಪನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನಲ್ಲಿ ಸೋತು ಟೂರ್ನಿಯಿಂದ ನಿರ್ಮಿಸಿದ್ದಾರೆ.ಗುರುವಾರ ತಡರಾತ್ರಿ ನಡೆದ ಎರಡನೇ ಸುತ್ತಿನ ಪಂದ್ಯದಲ್ಲಿ 124ನೇ ರಾಂಕಿನ ಸುಮಿತ್ 3-6, 3-6, 2-6 ನೇರ ಸೆಟ್ ಗಳಿಂದ ವಿಶ್ವದ 3ನೇ ರಾಂಕಿನ ಆಸ್ಟ್ರೀಯಾದ ಡಾಮಿನಿಕ್ ಥೀಮ್ ವಿರುದ್ಧ ಪರಾಭವಗೊಂಡರು.ವಿಶೇಷವೆಂದರೆ ತನ್ನ 27 ನೇ ಹುಟ್ಟುಹಬ್ಬವನ್ನು ಗುರುವಾರ ಆಚರಿಸಿಕೊಳ್ಳಲಿದ್ದ ಡಾಮಿನಿಕ್ ಥೀಮ್ ಅವರಿಗೆ ಈ ಗೆಲುವು ಹುಟ್ಟುಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಇದಕ್ಕೆ ಮುನ್ನ ನಗಾಲ್ ಅಮೆರಿಕದ ಬ್ರಾಡ್ಲಿ ಕ್ಲಾನ್ ಅವರನ್ನು ಮಣಿಸಿ ಯುಎಸ್ ಓಪನ್ ಎರಡನೇ ಸುತ್ತಿಗೆ ಪ್ರವೇಶಿಸಿದ್ದರು. ಈ ಮೂಲಕ ಏಖು ವರ್ಷದ ಬಳಿಕ ಪ್ರತಿಷ್ಠಿತ ಗ್ರ್ಯಾಂಡ್ ಸ್ಲಾಂ ಟೂರ್ನಿಯ ಎರಡನೇ ಸುತ್ತಿಗೆ ಪ್ರವೇಶಿಸಿದ ಭಾರತೀಯ ಆಟಗಾರರೆನಿಸಿಕೊಂಡಿದ್ದರು.