ಟೋಕಿಯೊ ಒಲಂಪಿಕ್ಸ್ 2020: ಪ್ರಿ-ಕ್ವಾರ್ಟರ್‌ ಪಂದ್ಯದಲ್ಲಿ ಭಾರತದ ಮೇರಿ ಕೋಮ್ ಗೆ ಸೋಲು, ಟೂರ್ನಿಯಿಂದಲೇ ಔಟ್ ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಭರವಸೆಯಾಗಿದ್ದ ಆರು ಬಾರಿಯ ವಿಶ್ವ ಚಾಂಪಿಯನ್ ಬಾಕ್ಸರ್ ಮೇರಿ ಕೋಮ್ ಪ್ರಿ-ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಭಾರತದ ಪದಕದ ಕನಸೊಂದು ನುಚ್ಚು ನೂರಾಗಿದೆ. ಟೋಕಿಯೊ: ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಭರವಸೆಯಾಗಿದ್ದ ಆರು ಬಾರಿಯ ವಿಶ್ವ ಚಾಂಪಿಯನ್ ಬಾಕ್ಸರ್ ಮೇರಿ ಕೋಮ್ ಪ್ರಿ-ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಭಾರತದ ಪದಕದ ಕನಸೊಂದು ನುಚ್ಚು ನೂರಾಗಿದೆ.ಟೋಕಿಯೊ ಕ್ರೀಡಾಕೂಟದ ಮಹಿಳೆಯರ 51 ಕೆ.ಜಿ.ವಿಭಾಗದಲ್ಲಿ 16ನೇ ಸುತ್ತಿನ ಹೋರಾಟದಲ್ಲಿ ಮೇರಿ ಕೋಮ್, ಕೊಲಂಬಿಯಾದ ಇಂಗ್ರಿಟ್‌ ವಲೆನ್ಸಿಯಾ ವಿರುದ್ಧ 2-3 ಅಂಕಗಳ ಅಂತರದಲ್ಲಿ ವಿರೋಚಿತ ಸೋಲು ಕಂಡಿದ್ದಾರೆ. ಮೇರಿ ಕೋಮ್ ಮೊದಲ ರೌಂಡ್‌ನಲ್ಲಿ 1-4ರ ಹಿನ್ನಡೆ ಅನುಭವಿಸಿದರು. ಬಳಿಕ ದಿಟ್ಟ ಹೋರಾಟ ನೀಡಿದರೂ ಯಶಸ್ಸು ದಕ್ಕಲಿಲ್ಲ. ಪಂದ್ಯ ಮುಗಿದ ಬಳಿಕ ಮೇರಿ ಕೋಮ್ ಅತ್ಯಂತ ಭಾವುಕರಾದರು. @ 2-3 . ' . . , !ಬಹುತೇಕ ತಮ್ಮ ಕೊನೆಯ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ 38 ವರ್ಷದ ಮೇರಿ ಕೋಮ್ ನಿರಾಸೆ ಅನುಭವಿಸಿದ್ದಾರೆ. ಈ ಹಿಂದೆ ಲಂಡನ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು.ಅತ್ತ 32 ವರ್ಷದ ವಲೆನ್ಸಿಯಾ 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಅಲ್ಲದೆ ಇದೇ ಮೊದಲ ಬಾರಿಗೆ ಮೇರಿ ವಿರುದ್ಧ ಗೆಲುವು ದಾಖಲಿಸಿದ್ದಾರೆ.