ಅರ್ಜೆಂಟೀನಾ ಗೆಲುವಿನಿಂದ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೆ ಖುಷಿ: ಪ್ರಧಾನಿ ಮೋದಿ ಮೂರನೇ ಬಾರಿ ಫಿಫಾ ವಿಶ್ವಕಪ್ ಗೆದ್ದ ಅರ್ಜೆಂಟೀನಾವನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ, ಭಾನುವಾರ ಫೈನಲ್ ಪಂದ್ಯ, ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ. ನವದೆಹಲಿ: ಮೂರನೇ ಬಾರಿ ಫಿಫಾ ವಿಶ್ವಕಪ್ ಗೆದ್ದ ಅರ್ಜೆಂಟೀನಾವನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ, ಭಾನುವಾರ ಫೈನಲ್ ಪಂದ್ಯ, ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.ಈ ಭವ್ಯವಾದ ಗೆಲುವಿನಿಂದ ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೆ ಸಂತೋಷವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.ಇದನ್ನು ಓದಿ: 36 ವರ್ಷಗಳ ಬಳಿಕ 3ನೇ ಬಾರಿ ಫಿಫಾ ವಿಶ್ವಕಪ್ ಗೆದ್ದ ಅರ್ಜೆಂಟೀನಾ, ಮೆಸ್ಸಿಗೆ ಗೆಲುವಿನ ವಿದಾಯ“ಇದು ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿ ನೆನಪಿನಲ್ಲಿ ಉಳಿಯುತ್ತದೆ! ಫಿಫಾ ವಿಶ್ವಕಪ್ ಚಾಂಪಿಯನ್ ಆದ ಅರ್ಜೆಂಟೀನಾಗೆ ಅಭಿನಂದನೆಗಳು! ಅವರು ಈ ಪಂದ್ಯಾವಳಿಯಲ್ಲಿ ಅದ್ಭುತವಾಗಿ ಆಡಿದ್ದಾರೆ. ಅರ್ಜೆಂಟೀನಾ ಮತ್ತು ಮೆಸ್ಸಿಯ ಲಕ್ಷಾಂತರ ಭಾರತೀಯ ಅಭಿಮಾನಿಗಳು ಈ ಭವ್ಯವಾದ ಗೆಲುವಿನಿಂದ ಸಂತೋಷಪಡುತ್ತಾರೆ! ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ! # ! ’ . ! @