ತಾಯಿ ಕಳೆದುಕೊಳ್ಳುವ ನಷ್ಟಕ್ಕಿಂತ ದೊಡ್ಡ ನಷ್ಟ ಮತ್ತೊಂದಿಲ್ಲ: ಹೀರಾಬೆನ್ ನಿಧನಕ್ಕೆ ಪಾಕ್ ಪ್ರಧಾನಿ ಸಂತಾಪ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ನಿಧನಕ್ಕೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಶುಕ್ರವಾರ ತೀವ್ರ ಸಂತಾಪ ಸೂಚಿಸಿದ್ದಾರೆ. ಇಸ್ಲಾಮಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ನಿಧನಕ್ಕೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಶುಕ್ರವಾರ ತೀವ್ರ ಸಂತಾಪ ಸೂಚಿಸಿದ್ದಾರೆ."ತಾಯಿಯನ್ನು ಕಳೆದುಕೊಳ್ಳುವ ನಷ್ಟಕ್ಕಿಂತ ದೊಡ್ಡ ನಷ್ಟ ಮತ್ತೊಂದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿಯ ನಿಧನಕ್ಕೆ ನನ್ನ ಸಂತಾಪ" ಎಂದು ಪಾಕ್ ಪ್ರಧಾನಿ ಷರೀಫ್ ಅವರು ಟ್ವೀಟ್ ಮಾಡಿದ್ದಾರೆ.ಇದನ್ನು ಓದಿ: ಪಂಚಭೂತಗಳಲ್ಲಿ ಲೀನರಾದ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಶತಾಯುಷಿ ಹೀರಾಬೆನ್ ಅವರು ಐವರು ಪುತ್ರರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸದ್ಯ ಹೀರಾಬೆನ್ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಗಣ್ಯರು ಸಂತಾಪಗಳನ್ನು ಸೂಚಿಸುತ್ತಿದ್ದಾರೆ. ಅಲ್ಲದೇ ಪ್ರಧಾನಿಯವರಿಗೆ ಧೈರ್ಯ ತುಂಬುತ್ತಿದ್ದಾರೆ.