ಭೂಕುಸಿತ: 2 ಸಾವಿರಕ್ಕೂ ಹೆಚ್ಚು ಮಂದಿ ಸಾವು; ಭಾರತದಿಂದ 1 ಮಿಲಿಯನ್ ಡಾಲರ್ ನೆರವು! ಪಪುವಾ ನ್ಯೂಗಿನಿಯಾದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಭೂಕುಸಿತದಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಭಾರತ ಸರ್ಕಾರ ಪುಟ್ಟರಾಷ್ಟ್ರದ ನೆರವಿಗೆ ನಿಂತಿದೆ. ನವದೆಹಲಿ: ಪಪುವಾ ನ್ಯೂಗಿನಿಯಾದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಭೂಕುಸಿತದಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಭಾರತ ಸರ್ಕಾರ ಪುಟ್ಟರಾಷ್ಟ್ರದ ನೆರವಿಗೆ ನಿಂತಿದೆ.ಶುಕ್ರವಾರ ಎಂಗಾ ಪ್ರಾಂತ್ಯದಲ್ಲಿ ಭೂಕುಸಿತ ಸಂಭವಿಸಿದಾಗ 2000 ಕ್ಕೂ ಹೆಚ್ಚು ಜನರು ಜೀವಂತವಾಗಿ ಸಮಾಧಿಯಾಗಿದ್ದು, ಅಲ್ಲಿನ ಪುನರ್ವಸತಿ ಮತ್ತು ಪುನರ್ನಿರ್ಮಾಣ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಸರ್ಕಾರವು 1 ಮಿಲಿಯನ್ ಡಾಲರ್ ಹಣವನ್ನು ಪರಿಹಾರವಾಗಿ ನೀಡುವುದಾಗಿ ಘೋಷಿಸಿದೆ.ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, "ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದಿಂದ ಉಂಟಾದ ಜೀವಹಾನಿ ಮತ್ತು ಆಸ್ತಿ ಹಾನಿಯಿಂದ ತೀವ್ರ ದುಃಖವಾಗಿದೆ. ಸಂತ್ರಸ್ತ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಭಾರತವು ಸಾಧ್ಯವಿರುವ ಎಲ್ಲ ಬೆಂಬಲ ಮತ್ತು ಸಹಾಯವನ್ನು ನೀಡಲು ಸಿದ್ಧವಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ. . . .ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರದ ವೇದಿಕೆ (ಎಫ್‌ಐಪಿಐಸಿ) ಅಡಿಯಲ್ಲಿ ನಿಕಟ ಸ್ನೇಹಿತ ಮತ್ತು ಪಾಲುದಾರ ರಾಷ್ಟ್ರವಾಗಿ ಭಾರತ ಪಪುವಾ ನ್ಯೂಗಿನಿಯಾದ ಜನರೊಂದಿಗೆ ಒಗ್ಗಟ್ಟಿನ ಸೂಚಕವಾಗಿ ತತ್ ಕ್ಷಣದ ಪರಿಹಾರವಾಗಿ 1 ಮಿಲಿಯನ್ ಡಾಲರ್ ಹಣವನ್ನು ನೀಡುವುದಾಗಿ ಘೋಷಣೆ ಮಾಡಿದೆ. ಈ ಹಿಂದೆಯೂ ಸಾಕಷ್ಟು ಬಾರಿ ಭಾರತ ಈ ಪುಟ್ಟ ರಾಷ್ಟ್ರದ ಬೆಂಬಲಕ್ಕೆ ನಿಂತಿತ್ತು. 2018 ರಲ್ಲಿ ಭೂಕಂಪ ಮತ್ತು 2019 ಮತ್ತು 2023 ರಲ್ಲಿ ಜ್ವಾಲಾಮುಖಿ ಸ್ಫೋಟಗಳಂತಹ ನೈಸರ್ಗಿಕ ವಿಕೋಪಗಳಿಂದ ಉಂಟಾದ ಕಷ್ಟ ಮತ್ತು ವಿನಾಶದ ಸಮಯದಲ್ಲಿ ಭಾರತವು ಪಪುವಾ ನ್ಯೂಗಿನಿಯಾದ ಪರವಾಗಿ ದೃಢವಾಗಿ ನಿಂತು ನೆರವು ನೀಡಿತ್ತು.# | 2,000 24, #, , 670. .… ../fG5H0b8GbQ