ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಆಘಾತ: 7.4 ತೀವ್ರತೆಯ ಪ್ರಬಲ ಭೂಕಂಪನ, ಸುನಾಮಿ ಎಚ್ಚರಿಕೆ ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಟೋಕಿಯೋ: ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನ ಸಂಭವಿಸಿದ್ದು, ಜಪಾನ್ ನ ಈಶಾನ್ಯ ಭಾಗದ ನನಾವೋ ನಲ್ಲಿ ಭೂ ಕಂಪನದ ಕೇಂದ್ರ ಬಿಂದು ವರದಿಯಾಗಿದೆ. ಇದನ್ನೂ ಓದಿ: ಮತ್ತೊಂದು ಹಡಗು ಅಪಹರಣಕ್ಕೆ ಯತ್ನಿಸಿದ ಹೌತಿ ಉಗ್ರರ ಬೋಟ್ ಸ್ಫೋಟಿಸಿದ ಅಮೆರಿಕ ಸೇನೆಜಪಾನ್ ನ ಇಶಿಕಾವಾ, ನಿಗಾಟಾ ಮತ್ತು ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಜಪಾನ್ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. , ! # # ../moNwOIH7xpಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಎತ್ತರದ ಪ್ರದೇಶಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. 5 ಮೀಟರ್ (16 ಅಡಿ) ಎತ್ತರದವರೆಗೆ ಅಲೆಗಳು ಬರುವ ಸಾಧ್ಯತೆಯಿದ್ದು, ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.ಇದನ್ನೂ ಓದಿ: ಯಾವುದೇ ಕ್ಷಣದಲ್ಲಿ ಯುದ್ಧ, ಸಂಭಾವ್ಯ ಸೇನಾ ಕಾಳಗಕ್ಕೆ ಸಿದ್ಧರಾಗಿರಿ: ಉತ್ತರ ಕೊರಿಯಾ ಸೇನೆಗೆ ಸರ್ವಾಧಿಕಾರಿ ಕಿಮ್ ಎಚ್ಚರಿಕೆಟೋಕಿಯೊ ಮತ್ತು ಇಡೀ ಕಾಂಟೊ ಪ್ರದೇಶದಲ್ಲಿ ಕಂಪನಗಳು ಸಂಭವಿಸಿವೆ. 2011 ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿದೆ. ಆಗ ಎದ್ದ ಸುನಾಮಿ ಅಲೆಗಳು ಫುಕುಶಿಮಾ ಪರಮಾಣು ಸ್ಥಾವರವನ್ನು ನಾಶಪಡಿಸಿದ್ದವು.