ಪಾಕಿಸ್ತಾನದಲ್ಲಿ ಮುಂದಿನ ವರ್ಷ ಜನವರಿ ಕೊನೆಯ ವಾರದಲ್ಲಿ ಸಾರ್ವತ್ರಿಕ ಚುನಾವಣೆ ಪಾಕಿಸ್ತಾನದ ಚುನಾವಣಾ ಆಯೋಗ ಗುರುವಾರ ದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳು 2024ರ ಜನವರಿ ಕೊನೆಯ ವಾರದಲ್ಲಿ ನಡೆಯಲಿವೆ ಎಂದು ಘೋಷಿಸಿದೆ. ಇಸ್ಲಾಮಾಬಾದ್: ಪಾಕಿಸ್ತಾನದ ಚುನಾವಣಾ ಆಯೋಗ ಗುರುವಾರ ದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳು 2024ರ ಜನವರಿ ಕೊನೆಯ ವಾರದಲ್ಲಿ ನಡೆಯಲಿವೆ ಎಂದು ಘೋಷಿಸಿದೆ. ಕ್ಷೇತ್ರಗಳ ಮರು ವಿಂಗಡಣೆಯ ಕೆಲಸವನ್ನು ಪರಿಶೀಲಿಸಿದ್ದು, ಕ್ಷೇತ್ರಗಳ ವಿಂಗಡಣೆಯ ಆರಂಭಿಕ ಪಟ್ಟಿಯನ್ನು ಸೆಪ್ಟೆಂಬರ್ 27 ರಂದು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.ಇದನ್ನು ಓದಿ: ಭಾರತ ಚಂದ್ರನನ್ನು ತಲುಪಿದೆ, ಪಾಕಿಸ್ತಾನ ಪ್ರಪಂಚದ ಮುಂದೆ ಭಿಕ್ಷೆ ಬೇಡುತ್ತಿದೆ: ನವಾಜ್ ಷರೀಫ್ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಲಿಸಿದ ನಂತರ ನವೆಂಬರ್ 30 ರಂದು ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಆಯೋಗ ಹೇಳಿದೆ.2024ರ ಜನವರಿ ಕೊನೆಯ ವಾರದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.ಆಗಸ್ಟ್ 9 ರಂದು ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜನೆ ಮಾಡಿದ ನಂತರ, 90 ದಿನಗಳಲ್ಲಿ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ.