: ಭಾರತ ವಿರೋಧಿ ನಿಲುವಿನ ಮಹಮದ್ ಮುಯಿಜುಗೆ ಬಹುಮತ, ಮತ್ತೆ ಅಧಿಕಾರಕ್ಕೆ! ಭಾರತ ವಿರೋಧಿ ಮನಸ್ಥಿತಿಯ ಅಧ್ಯಕ್ಷ ಮೊಹಮ್ಮದ್‌ ಮುಯಿಜು ( ) ಮಾಲ್ಡೀವ್ಸ್‌ನಲ್ಲಿ ನಡೆದ ಚುನಾವಣೆಯಲ್ಲಿ ( ) ಭಾರಿ ಬಹುಮತದಲ್ಲಿ ಆರಿಸಿ ಬಂದಿದ್ದು, ಮತ್ತೆ ಸರ್ಕಾರ ರಚನೆ ಮಾಡಲಿದ್ದಾರೆ. ಮಾಲೆ: ಭಾರತ ವಿರೋಧಿ ಮನಸ್ಥಿತಿಯ ಅಧ್ಯಕ್ಷ ಮೊಹಮ್ಮದ್‌ ಮುಯಿಜು ( ) ಮಾಲ್ಡೀವ್ಸ್‌ನಲ್ಲಿ ನಡೆದ ಚುನಾವಣೆಯಲ್ಲಿ ( ) ಭಾರಿ ಬಹುಮತದಲ್ಲಿ ಆರಿಸಿ ಬಂದಿದ್ದು, ಮತ್ತೆ ಸರ್ಕಾರ ರಚನೆ ಮಾಡಲಿದ್ದಾರೆ.ಮಾಲ್ಡೀವ್ಸ್‌ನ ಸಂಸತ್ತಿಗೆ (ಮಜ್ಲಿಸ್) ನಡೆದ ಚುನಾವಣೆಯಲ್ಲಿ ಚೀನಾ ಪರ ( ) ಆಡಳಿತ ನೀಡುತ್ತಿರುವ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಪಕ್ಷ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ (ಪಿಎನ್‌ಸಿ) ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.ಆಡಳಿತ ಪಕ್ಷವಾಗಿರುವ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಮಾಲ್ಡೀವ್ಸ್‌ನ 93 ಸ್ಥಾನಗಳ ಪೈಕಿ 86ರಲ್ಲಿ ಸ್ಪರ್ಧಿಸಿತ್ತು. ಇದೀಗ ಫಲಿತಾಂಶ ಪ್ರಕಟ ಬಳಿಕ ಮಾಲ್ಡೀವ್ಸ್ ಸಂಸತ್ತಿನಲ್ಲಿ ಬಹುಮತವನ್ನು ಪಡೆದುಕೊಂಡಿದೆ.ಮೂಲಗಳ ಪ್ರಕಾರ 86 ಸ್ಥಾನಗಳ ಪೈಕಿ ಪಿಎನ್‌ಸಿ 66 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪ್ರಮುಖ ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ () ಕೇವಲ 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸ್ವತಂತ್ರ ಅಭ್ಯರ್ಥಿಗಳು 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಮಾಲ್ಡೀವ್ಸ್ ಡೆವಲಪ್ಮೆಂಟ್ ಅಲಯನ್ಸ್ ಎರಡು ಸ್ಥಾನಗಳಲ್ಲಿ ಗೆಲುವು ಪಡೆದಿದೆ.ಮುಯಿಜುಗೆ ಅನಿವಾರ್ಯವಾಗಿದ್ದ ಗೆಲುವುಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವಿಪಕ್ಷ ನಾಯಕ ಮೊಹಮ್ಮದ್‌ ಸೋಲಿಹ್ ಅವರನ್ನು ಸೋಲಿಸುವ ಮೂಲಕ ಮುಯಿಝು ಅಧ್ಯಕ್ಷರಾದರು. ಸೊಲಿಹ್ ಅವರ ಪಕ್ಷ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಕ್ಷವು ಪ್ರಸ್ತುತ ಸಂಸತ್ತಿನಲ್ಲಿ ಬಹುಮತವನ್ನು ಹೊಂದಿತ್ತು.ಇದು ಮುಯಿಜುಗೆ ಹೊಸ ವಿಧೇಯಕಗಳನ್ನು ತರಲು ಅಡ್ಡಿಯುಂಟುಮಾಡಿತ್ತು. ಚೀನಾ ಪರವಾದ ಹೊಸ ಕಾನೂನುಗಳನ್ನು ಮಾಡಲು ಹಾಲಿ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಪಕ್ಷಕ್ಕೆ ಸಂಸತ್ತಿನ ಚುನಾವಣೆಯಲ್ಲಿ ಗೆಲ್ಲುವುದು ಅನಿವಾರ್ಯವಾಗಿತ್ತು. ಇದೀಗ ನಿರೀಕ್ಷೆಯಂತೆಯೇ ಮುಯಿಜು ಜಯಭೇರಿ ಭಾರಿಸಿದ್ದಾರೆ.