ಎಲಿಜಬೆತ್ ಅಂತ್ಯಕ್ರಿಯೆ ಹಿನ್ನೆಲೆ: ಲಂಡನ್ ಗೆ ತೆರಳಿದ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಸೆಪ್ಟೆಂಬರ್ 19ರಂದು ನಡೆಯಲಿರುವ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂಗ್ಲೆಂಡ್ಗೆ ತೆರಳಿದ್ದಾರೆ. ನವದೆಹಲಿ: ಸೆಪ್ಟೆಂಬರ್ 19ರಂದು ನಡೆಯಲಿರುವ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂಗ್ಲೆಂಡ್ಗೆ ತೆರಳಿದ್ದಾರೆ.ಭಾನುವಾರ ಮುಂಜಾನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲಂಡನ್ ಗೆ ಆಗಮಿಸಿದ್ದು, ಭಾರತದ ಪರವಾಗಿ ರಾಜಮನೆತನಕ್ಕೆ ಸಂತಾಪ ಸೂಚಿಸಲಿದ್ದಾರೆ. ರಾಷ್ಟ್ರಪತಿ ಹುದ್ದೆ ಅಲಂಕರಿಸಿದ ಬಳಿಕ ಮುರ್ಮು ಅವರು ಕೈಗೊಳ್ಳುತ್ತಿರುವ ಮೊದಲ ವಿದೇಶಿ ಪ್ರವಾಸ ಇದಾಗಿದೆ.ಇದನ್ನೂ ಓದಿ: ವೆಸ್ಟ್‌ಮಿನಿಸ್ಟರ್ ಹಾಲ್‌ನಲ್ಲಿ ಬ್ರಿಟನ್ ರಾಣಿ 2ನೇ ಎಲಿಜಬೆತ್ ಗೆ ಅಂತಿಮ ನಮನ: ಚೀನಾ ನಿಯೋಗಕ್ಕೆ ನಿಷೇಧಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಬರುವ ಎಲ್ಲ ದೇಶಗಳ ಗಣ್ಯರು ಸರ್ಕಾರಿ ವಿಮಾನದ ಬದಲಾಗಿ ಖಾಸಗಿ ವಿಧಾನದಲ್ಲಿ ಬರಲು ಬ್ರಿಟನ್ ಅರಮನೆ ಮನವಿ ಮಾಡಿಕೊಂಡಿತ್ತು. ಹೀಗಾಗಿ ದ್ರೌಪದಿ ಮುರ್ಮು ಅವರು ಖಾಸಗಿ ವಿಮಾನದಲ್ಲಿ ಇಂಗ್ಲೆಂಡ್ಗೆ ತೆರಳಿದ್ದಾರೆ. | 19 ( : ' ) ../yavFAwPEmqಬ್ರಿಟನ್ ಇತಿಹಾಸದಲ್ಲಿ ಅತಿ ಹೆಚ್ಚು ವರ್ಷ ಆಳ್ವಿಕೆ ನಡೆಸಿದ ಎರಡನೇ ಎಲಿಜಬೆತ್ ರಾಣಿ 96ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಸೆಪ್ಟೆಂಬರ್ 8 ರಂದು ನಿಧನರಾಗಿದ್ದರು. ಸೆಪ್ಟೆಂಬರ್ 19 ರಂದು ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರ ಅಂತ್ಯಕ್ರಿಯೆ ಸೆಂಟ್ರಲ್ ಲಂಡನ್ನ ವೆಸ್ಟ್ ಮಿನಿಸ್ಟರ್ ಅಬ್ಬೆಯಲ್ಲಿ ನಡೆಯಲಿದೆ. ಇದನ್ನೂ ಓದಿ: ಬ್ರಿಟನ್ ರಾಣಿಯ ಅಂತ್ಯಕ್ರಿಯೆ: ಈ 6 ರಾಷ್ಟ್ರಗಳಿಗೆ ಆಹ್ವಾನ ಇಲ್ಲ!ರಾಣಿಯ ಶವಪೆಟ್ಟಿಗೆಯನ್ನು ವಿಂಡ್ಸರ್ ಕ್ಯಾಸಲ್‌ಗೆ ಕೊಂಡೊಯ್ಯುವ ಮೂಲಕ 6ನೇ ಕಿಂಗ್ ಜಾರ್ಜ್ ಸ್ಮಾರಕ ಪ್ರಾರ್ಥನಾ ಮಂದಿರದಲ್ಲಿ ಅವರ ತಂದೆ 5ನೇ ಜಾರ್ಜ್ ಅವರ ಸಮಾಧಿಯ ಪಕ್ಕದಲ್ಲಿ ರಾಣಿ ಸಮಾಧಿ ಮಾಡಲು ನಿರ್ಧರಿಸಲಾಗಿದೆ.