ಇಮ್ರಾನ್ ಖಾನ್ ಗೆ 2 ವಾರಗಳ ಜಾಮೀನು ಇಸ್ಲಾಮಾಬಾದ್ ಹೈಕೋರ್ಟ್ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 2 ವಾರಗಳ ಜಾಮೀನು ಮಂಜೂರು ಮಾಡಿದೆ. ನವದೆಹಲಿ: ಇಸ್ಲಾಮಾಬಾದ್ ಹೈಕೋರ್ಟ್ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 2 ವಾರಗಳ ಜಾಮೀನು ಮಂಜೂರು ಮಾಡಿದೆ. ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಇಮ್ರಾನ್ ಖಾನ್ ಶುಕ್ರವಾರದಂದು ಇಸ್ಲಾಮಾಬಾದ್ ಹೈಕೋರ್ಟ್ ಎದುರು ಹಾಜರಾಗಿದ್ದರು. ಇದನ್ನೂ ಓದಿ: ಇಮ್ರಾನ್ ಖಾನ್ ಬಂಧನ: ಪಾಕಿಸ್ತಾನದ ಇತಿಹಾಸದಲ್ಲೇ ಮೊದಲು..ಪಾಕ್ ಸೇನೆ ವಿರುದ್ಧವೇ ತಿರುಗಿ ಬಿದ್ದ ಜನ! ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್ಅಲ್ ಖೈದಾ ಟ್ರಸ್ಟ್ ಪ್ರಕರಣದಲ್ಲಿ ಎನ್ ಎಬಿ ಅಧಿಕಾರಿಗಳು, ಇಮ್ರಾನ್ ಖಾನ್ ಅವರನ್ನು ಮಂಗಳವಾರ ಬಂಧನಕ್ಕೊಳಪಡಿಸಿದ್ದರು. ಅವರ ಬಂಧನವನ್ನು ಎತ್ತಿಹಿಡಿದಿದೆ ಆದರೆ ನ್ಯಾಯಾಲಯದ ಒಳಗಿನಿಂದ ಯಾರನ್ನೂ ಬಂಧಿಸಲಾಗುವುದಿಲ್ಲ ಎಂದು ಘೋಷಿಸಿದ ಸುಪ್ರೀಂ ಕೋರ್ಟ್ ಗುರುವಾರ ಅವರ ಜೈಲುವಾಸವನ್ನು ಅಸಿಂಧುಗೊಳಿಸಿತು ಮತ್ತು ಅವರನ್ನು ಸುಪ್ರೀಂ ಕೋರ್ಟ್‌ನ ರಕ್ಷಣೆಯಲ್ಲಿ ಇರಿಸಲು ಮತ್ತು ಬೆಳಿಗ್ಗೆ 11 ಗಂಟೆಗೆ ಅವರನ್ನು ಹೈಕೋರ್ಟ್‌ಗೆ ಹಾಜರುಪಡಿಸುವಂತೆ ಪೊಲೀಸರಿಗೆ ಸೂಚಿಸಿದ್ದರಿಂದ ಅವರನ್ನು ಬಿಡುಗಡೆ ಮಾಡಲು ಆದೇಶಿಸಿತ್ತು.