ಇಮ್ರಾನ್ ಖಾನ್ ಗೆ ಬಂಧನದಿಂದ ರಕ್ಷಣೆ ಮೇ 31 ರವರೆಗೆ ವಿಸ್ತರಿಸಿದ ಪಾಕ್ ಕೋರ್ಟ್ ಪಾಕಿಸ್ತಾನದ ಉನ್ನತ ನ್ಯಾಯಾಲಯ ಮೇ 9 ರ ನಂತರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ವಿರುದ್ಧ ದಾಖಲಾಗಿರುವ ಯಾವುದೇ ಪ್ರಕರಣದಲ್ಲಿ ಅವರನ್ನು ಬಂಧಿಸದಂತೆ ಹೊರಡಿಸಿದ್ದ ಆದೇಶವನ್ನು ಮೇ 31 ರವರೆಗೆ ವಿಸ್ತರಿಸಿದೆ. ಇಸ್ಲಾಮಾಬಾದ್‌: ಪಾಕಿಸ್ತಾನದ ಉನ್ನತ ನ್ಯಾಯಾಲಯ ಮೇ 9 ರ ನಂತರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ವಿರುದ್ಧ ದಾಖಲಾಗಿರುವ ಯಾವುದೇ ಪ್ರಕರಣದಲ್ಲಿ ಅವರನ್ನು ಬಂಧಿಸದಂತೆ ಹೊರಡಿಸಿದ್ದ ಆದೇಶವನ್ನು ಮೇ 31 ರವರೆಗೆ ವಿಸ್ತರಿಸಿದೆ.70 ವರ್ಷದ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಮುಖ್ಯಸ್ಥರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆ ಮಾಹಿತಿ ನೀಡಲು ಸರ್ಕಾರಿ ವಕೀಲರು ಹೆಚ್ಚಿನ ಸಮಯ ಕೋರಿದ ನಂತರ ಇಸ್ಲಾಮಾಬಾದ್ ಹೈಕೋರ್ಟ್ ಈ ತೀರ್ಪು ನೀಡಿದೆ.ಖಾನ್ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳ ವಿವರಗಳನ್ನು ಕೋರಿ ಪಿಟಿಐ ಸಲ್ಲಿಸಿದ್ದ ಮನವಿಯನ್ನು ಕೋರ್ಟ್ ವಿಚಾರಣೆ ನಡೆಸುತ್ತಿದೆ. ಪಿಟಿಐ ಮುಖ್ಯಸ್ಥರ ವಿರುದ್ಧ ದೇಶಾದ್ಯಂತ 100ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಖಾನ್ ಅವರ ಪಕ್ಷ ಹೇಳಿದೆ.ಇದನ್ನು ಓದಿ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಗುಂಪುಗಳ ಮಧ್ಯೆ ಹಿಂಸಾಚಾರ: 16 ಮಂದಿ ಸಾವುಸರ್ಕಾರಿ ವಕೀಲರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಮೇ 31ಕ್ಕೆ ಮುಂದೂಡಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.ಇಸ್ಲಾಮಾಬಾದ್ ಹೈಕೋರ್ಟ್, ಕಳೆದ ಶುಕ್ರವಾರ ಅಲ್-ಖಾದಿರ್ ಟ್ರಸ್ಟ್ ಭ್ರಷ್ಟಾಚಾರ ಪ್ರಕರಣದಲ್ಲಿ ಖಾನ್ ಅವರಿಗೆ ಎರಡು ವಾರಗಳ ಕಾಲ ನಿರೀಕ್ಷಣಾ ಜಾಮೀನು ನೀಡಿದೆ ಮತ್ತು ಮೇ 15 ರವರೆಗೆ ದೇಶದಲ್ಲಿ ದಾಖಲಾದ ಯಾವುದೇ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿಯನ್ನು ಬಂಧಿಸದಂತೆ ನಿರ್ಬಂಧಿಸಿದೆ.ಮೇ 9 ರಂದು ಹೈಕೋರ್ಟ್ ಆವರಣದಿಂದ ಖಾನ್‌ರನ್ನು ನಾಟಕೀಯ ರೀತಿಯಲ್ಲಿ ಬಂಧಿಸಿರುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಹೇಳಿದೆ.