ಕೆನಡಾ: ಅಗ್ನಿ ಅವಘಡದಲ್ಲಿ ಭಾರತೀಯ ಮೂಲದ ಮೂವರು ದುರ್ಮರಣ! ಕಳೆದ ವಾರ ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ 'ಅನುಮಾನಾಸ್ಪದ' ಮನೆ ಬೆಂಕಿಯಲ್ಲಿ ಪ್ರಾಣ ಕಳೆದುಕೊಂಡವರನ್ನು ಭಾರತೀಯ ಮೂಲದ ದಂಪತಿಗಳು ಮತ್ತು ಅವರ ಮಗಳು ಎಂದು ಗುರುತಿಸಲಾಗಿದ್ದು ಈ ಬಗ್ಗೆ ಇಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಒಟ್ಟಾವಾ: ಕಳೆದ ವಾರ ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ 'ಅನುಮಾನಾಸ್ಪದ' ಮನೆ ಬೆಂಕಿಯಲ್ಲಿ ಪ್ರಾಣ ಕಳೆದುಕೊಂಡವರನ್ನು ಭಾರತೀಯ ಮೂಲದ ದಂಪತಿಗಳು ಮತ್ತು ಅವರ ಮಗಳು ಎಂದು ಗುರುತಿಸಲಾಗಿದ್ದು ಈ ಬಗ್ಗೆ ಇಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಮಾರ್ಚ್ 7ರಂದು ಬ್ರಾಂಪ್ಟನ್‌ನ ಬಿಗ್ ಸ್ಕೈ ವೇ ಮತ್ತು ವ್ಯಾನ್ ಕಿರ್ಕ್ ಡ್ರೈವ್ ಪ್ರದೇಶದಲ್ಲಿ ಅನುಮಾನಾಸ್ಪದ ಸಂದರ್ಭಗಳಲ್ಲಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಪೀಲ್ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಬೆಂಕಿ ನಂದಿಸಿದ ನಂತರ ಪೊಲೀಸರು ಮನೆಯಲ್ಲಿ ಹುಡುಕಾಟ ನಡೆಸಿದ್ದಾಗ ಮಾನವ ಅವಶೇಷಗಳು ಪತ್ತೆಯಾಗಿತ್ತು. ಆದರೆ ಆ ಸಮಯದಲ್ಲಿ ಸತ್ತವರ ಗುರುತು ಮತ್ತು ಸಂಖ್ಯೆ ಪತ್ತೆಯಾಗಿರಲಿಲ್ಲ.ಶುಕ್ರವಾರ ಮೃತಪಟ್ಟವರನ್ನು ಭಾರತೀಯ ಮೂಲದ ರಾಜೀವ್ ವಾರಿಕು (51), ಅವರ ಪತ್ನಿ ಶಿಲ್ಪಾ ಕೋಥಾ (47) ಮತ್ತು ಮಗಳು ಮೆಹಕ್ (16) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.